Harish Poonja: ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ; ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ

09-06-23 04:02 pm       Bangalore Correspondent   ಕರ್ನಾಟಕ

'ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ' ಎಂಬ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. 

ಬೆಂಗಳೂರು, ಜೂನ್ 9: 'ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ' ಎಂಬ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. 

ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಐಪಿಸಿ ಸೆಕ್ಷನ್ 153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ಹಾಗಿದ್ದರೂ ವಿಳಂಬವಾಗಿ ದೂರು ದಾಖಲಿಸಲಾಗಿದೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ಹೈಕೋರ್ಟ್ ನಲ್ಲಿ ವಾದ ಮಂಡಿಸಿದರು. ಇದರಂತೆ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

Attara Kacheri - Wikipedia

Karnataka govt to receive socio-economic caste survey report: CM  Siddaramaiah | Bengaluru - Hindustan Times

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಕೆಲವು ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ’24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಹಿಂದು ಸಂಘಟನೆಗಳ ನಾಯಕರ ಬಗ್ಗೆ ಕಿಡಿಕಾರಿದ್ದರು. ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೆಳ್ತಂಗಡಿ, ಪುತ್ತೂರು ಸೇರಿ ಹಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ದೂರು ನೀಡಿದ್ದರು.

Mla Harish Poonja on Siddaramaiah murdered 24 Hindus, high court issues stay order on Belthangady MLA. The High Court, on Friday, issued a stay on the case filed against Beltangady BJP MLA Harish Poonja in relation to the alleged statement made against Siddaramaiah regarding the “killing of 24 Hindu workers.”. The court granted an interim stay on the investigation, stating that the case is not fit to be registered under Section 153A of the Indian Penal Code (IPC).