ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.
ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm