ಬ್ರೇಕಿಂಗ್ ನ್ಯೂಸ್
14-06-23 01:26 pm HK News Desk ಕರ್ನಾಟಕ
ಮೈಸೂರು, ಜೂನ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿಯ ಕೆಲ ಮಹಾ ನಾಯಕರು ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ಧ ಇದ್ದ ಅರ್ಕಾವತಿ ಡಿನೋಟಿಫಿಕೇಷನ್, ರೀಡೂ ಪ್ರಕರಣ ಹಾಗೂ ಕೆಂಪಣ್ಣ ಆಯೋಗದ ವರದಿ ಬಗ್ಗೆ ನಿರ್ಲಕ್ಷ್ಯ ತೋರಿದ್ದು. ಸಿದ್ದರಾಮಯ್ಯ ಅವರನ್ನ ಹೆದರಿಸುತ್ತಿದ್ದರೇ ಹೊರತು ಯಾವತ್ತು ಅದನ್ನ ತನಿಖೆಯಾಗಲು ಬಿಡಲಿಲ್ಲ. ಅದೇ ರೀತಿ ಈಗ ಸಿದ್ದರಾಮಯ್ಯ ಸಹ ಮಾಡುತ್ತಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಸ್ವಪಕ್ಷೀಯರ ವಿರುದ್ಧವೇ ಕುಟುಕಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ 40 ಶೇಕಡಾ ಆರೋಪ, ಬಿಟ್ ಕಾಯಿನ್, ಪಿಎಸ್ ಐ ಹಗರಣದ ವಿರುದ್ಧ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಹೊರತು ಅಧಿಕಾರಕ್ಕೆ ಬಂದು ಇಷ್ಟು ದಿನ ಆದ್ರೂ ತನಿಖೆ ಬಗ್ಗೆ ಚಕಾರ ಎತ್ತುತ್ತಿಲ್ಲ. ಸಿದ್ದರಾಮಯ್ಯಗೆ ಬಿಜೆಪಿ ನಾಯಕರ ಜೊತೆ ಆ ರೀತಿ ಅಡ್ಜಸ್ಟಮೆಂಟ್ ಮಾಡ್ತಾ ಇಲ್ಲ ಅನ್ನೋದಾದ್ರೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಲಿ ಎಂದು ಸವಾಲೆಸೆದರು.
ಅಷ್ಟೇ ಅಲ್ಲ, ಕಾಂಗ್ರೆಸ್ ಜೊತೆಗೆ ಬಿಜೆಪಿ ನಾಯಕರು ಈ ರೀತಿ ಒಪ್ಪಂದ ಮಾಡಿಕೊಂಡಿದ್ದಾರೆ ಹೊರತು ಕಾರ್ಯಕರ್ತರಲ್ಲ. ನಾವು ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ವಿರುದ್ಧ ಹೋರಾಟ ನಡೆಸಿಯೇ ನಡೆಸುತ್ತೇವೆ ಎನ್ನುವ ಮೂಲಕ ಪಕ್ಷದ ನಾಯಕರು ಎನಿಸಿಕೊಂಡವರು ಮೌನ ವಹಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸಂಸದ ಪ್ರತಾಪಸಿಂಹ ಈ ರೀತಿ ಆರೋಪ ಮಾಡಿದ್ರೂ ಎಲ್ಲಿಯೂ ಬಿಜೆಪಿ ನಾಯಕರ ಹೆಸರನ್ನ ಪ್ರಸ್ತಾಪ ಮಾಡಿಲ್ಲ.
ರಾಜ್ಯ ಬಿಜೆಪಿ ಈಗಾಗಲೇ ಒಡೆದ ಮನೆಯಾಗಿದ್ದು ನಾಯಕರು ಗುಂಪು ಕಟ್ಟಿಕೊಂಡಿದ್ದಾರೆ. ಈಗ ಮಹಾನ್ ನಾಯಕರು ಎನ್ನುವ ಪಕ್ಷದ ಮುಂಚೂಣಿ ವ್ಯಕ್ತಿಗಳ ವಿರುದ್ಧವೇ ಹೇಳಿಕೆ ನೀಡಿ ಹೊಸ ಸಂಚಲನ ಮೂಡಿಸಿದ್ದಾರೆ. ವಿಪಕ್ಷ ನಾಯಕ, ಹೊಸ ರಾಜ್ಯಾಧ್ಯಕ್ಷ ಹುಡುಕಾಟದಲ್ಲಿ ಕಾಲ ತಳ್ಳುತ್ತಿರುವ ರಾಜ್ಯ ಬಿಜೆಪಿಗೆ ಪ್ರತಾಪಸಿಂಹ ಮಾತು ಚಾಟಿಯಲ್ಲಿ ಬೀಸಿದಂತಾಗಿದೆ.
Mysuru MP Pratap Simha made serious allegations against a few leaders of his own party of “adjustment politics” with CM Siddaramaiah. “A few senior BJP leaders may not talk against Siddaramaiah, but BJP activists will never engage in such adjustment politics. Leaders may have lost elections, but activists will continue to fight,” he said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm