ಬ್ರೇಕಿಂಗ್ ನ್ಯೂಸ್
14-06-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14 : ಉಚಿತ ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಬಿಜೆಪಿಯವರು ಬಡವರ ವಿರೋಧಿಗಳು, ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಸರ್ಕಾರ ಏಕೆ ಪೂರೈಕೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ಗ್ಯಾರಂಟಿಗಳನ್ನು ಈಗಾಗಲೇ ಘೋಷಣೆ ಮಾಡಿದ್ದು, ಯಾವಾಗ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದೇವೆ. ಐದರ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು.
ಬಿಪಿಎಲ್, ಅಂತ್ಯೋದಯ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಬೇಕು. ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಕೆಜಿ ಅಕ್ಕಿಗೆ 34 ರೂ. ಹಾಗೂ 2.60 ಪೈಸೆ ಟ್ರಾನ್ಸ್‌ಪೋರ್ಟ್ ದರ ಆಗುತ್ತದೆ. ವರ್ಷಕ್ಕೆ 10,092 ಕೋಟಿ ರೂ. ಬೇಕು ಎಂದು ಹೇಳಿದರು.
ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಭಾರತೀಯ ಆಹಾರ ನಿಗಮದ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದೇವು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಡೆಪ್ಯುಟಿ ಮ್ಯಾನೇಜರ್ ಜೂನ್ 12 ರಂದು ತಮಗೆ ಪತ್ರ ಬರೆದು ಹೆಚ್ಚುವರಿಯಾಗಿ 2,08,425 ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1 ರಿಂದ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವು. ಆದರೆ, ಆ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದರು
ಆದರೆ, ಜೂನ್ 13ರಂದು ಪತ್ರ ಬರೆದಿರುವ ಎಫ್‌ಸಿಐ ಓಪನ್ ಮಾರ್ಕೆಟ್ ಸೇಲ್ಸ್ ಸ್ಕೀಂ ಜಾರಿ ಮಾಡಿ ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದ್ದಾರೆ. ಡೆಪ್ಯುಟಿ ಮ್ಯಾನೇಜರ್ 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ಹೇಳಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ನಮಗೆ ಯಾಕೆ ಅಕ್ಕಿಯನ್ನು ಪೂರೈಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ. ಅಕ್ಕಿ ಪೂರೈಸಲು ಛತ್ತೀಸ್ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಬಿಜೆಪಿಯವರು ಬಡವರ ವಿರೋಧಿಗಳು ಎಂದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಮಗೇನು ಪುಕ್ಕಟೆಯಾಗಿ ಅಕ್ಕಿ ಕೊಡುವುದಿಲ್ಲ. ಕೇಂದ್ರ ನೀಡುವ ಅಕ್ಕಿಗೆ ನಾವು ದುಡ್ಡು ಕೊಡುತ್ತೇವೆ. ಖಾಸಗಿಯವರಿಗೆ ಅಕ್ಕಿ ಪೂರೈಸುವ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪೂರೈಸುತ್ತಿಲ್ಲ ಎಂದು ಕಿಡಿಕಾರಿದರು.
ಎಷ್ಟೇ ಷಡ್ಯಂತ್ರ ಮಾಡಿದರು ಅಕ್ಕಿ ವಿತರಿಸುತ್ತೇವೆ!
ಈ ಹಿಂದೆಯೇ ನಮ್ಮಿಂದ ಅಕ್ಕಿ ಕೊಡಲು ಆಗಲ್ಲ ಎಂದಿದ್ದರೆ, ನಾವು ಬೇರೆ ರಾಜ್ಯಗಳಿಗೆ ಮನವಿ ಮಾಡುತ್ತಿದ್ದೇವು. ಇನ್ನು, ತಮಿಳುನಾಡು ಸರ್ಕಾರದಿಂದ ಶೇ.100ರಷ್ಟು ಭರವಸೆ ಸಿಕ್ಕಿಲ್ಲ. ಗುರುವಾರ ತೆಲಂಗಾಣಕ್ಕೆ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೋಗುತ್ತಿದ್ದಾರೆ. ಅಕ್ಕಿ ಪೂರೈಸಲು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಅಲ್ಲಿ ಯಾವ ರೀತಿ ಸ್ಪಂದನೆ ಸಿಗುತ್ತದೆ ಎಂಬ ಆಧಾರದ ಮೇಲೆ ಸ್ಪಷ್ಟ ಚಿತ್ರಣ ಸಿಗಲಿದೆ. ಪಂಜಾಬ್ ಸರ್ಕಾರ ಮುಂದಿನ ವರ್ಷ ಅಕ್ಕಿ ನೀಡುವುದಾಗಿ ಹೇಳಿದೆ. ಕೇಂದ್ರ ಎಷ್ಟೇ ಷಡ್ಯಂತ್ರ ಮಾಡಿದರು ಅಕ್ಕಿ ವಿತರಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
Karnataka Chief Minister Siddaramaiah on Wednesday accused the Centre of conspiring to "fail" the Congress administration's poll guarantee, by ensuring that the state doesn't get the required amount of rice to implement its Anna Bhagya scheme, which gives 10 kg of free rice to the poor. Soon after, BJP leader and former energy minister, Sunil Kumar Karkala, hit back, saying it was time for Siddaramaiah to live up to his words.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm