ಬ್ರೇಕಿಂಗ್ ನ್ಯೂಸ್
15-06-23 03:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ದುಬೈನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ವ್ಯಕ್ತಿಯ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದಲ್ಲಿ ತನಿಖೆಗೆ ಸಹಕಾರ ನೀಡದ ಫೇಸ್ಬುಕ್ ವಿರುದ್ಧ ಕರ್ನಾಟಕ ಹೈಕೋರ್ಟ್ ಕಿಡಿಕಾರಿದ್ದು ಇಷ್ಟು ನಿರ್ಲಕ್ಷ್ಯ ವಹಿಸಿದಲ್ಲಿ ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆಯನ್ನೇ ಬಂದ್ ಮಾಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಅವಹೇಳನ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಸೌದಿ ಅರೇಬಿಯಾ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಂಗಳೂರಿನ ಬಿಕರ್ನಕಟ್ಟೆಯ ಶೈಲೇಶ್ ಕುಮಾರ್ ಅವರ ಪರವಾಗಿ ಪತ್ನಿ ಕವಿತಾ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಫೇಸ್ಬುಕನ್ನು ತರಾಟೆಗೆ ತೆಗೆದುಕೊಂಡಿದೆ.
ಘಟನೆ ಕುರಿತು ವರದಿಯನ್ನು ಫೇಸ್‌ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭಾರತೀಯ ಪ್ರಜೆಯು ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರಕಾರ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದೆ.
ಮಂಗಳೂರು ಪೊಲೀಸರು ಪ್ರಕರಣ ಸಂಬಂಧ ಸಮರ್ಪಕ ತನಿಖೆ ಕೈಗೊಂಡು ಕೂಡಲೇ ವರದಿ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿದೆ. ಅರ್ಜಿದಾರ ಪರ ವಕೀಲರು, ಫೇಸ್‌ಬುಕ್ ಸಂಸ್ಥೆಯಿಂದ ಸಹಕಾರ ಸಿಗದ ಕಾರಣಕ್ಕೆ ತನಿಖೆಗೆ ತೊಂದರೆಯಾಗಿದೆ ಎಂದು ಹೇಳಿದಾಗ, ನ್ಯಾಯಮೂರ್ತಿ ದೀಕ್ಷಿತ್ ಫೇಸ್‌ಬುಕ್ ಪರ ವಕೀಲರನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ವಕೀಲರು ಘಟನೆಯ ಬಗ್ಗೆ ಮಾಹಿತಿಯೇ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದರು. ಇದರಿಂದ ಸಿಟ್ಟಿಗೆದ್ದ ನ್ಯಾಯಮೂರ್ತಿ, ಪ್ರಕರಣದ ತನಿಖೆಗೆ ಸಹಕಾರ ನೀಡದಿದ್ದರೆ ಇಡೀ ದೇಶದಲ್ಲಿ ಫೇಸ್‌ಬುಕ್ಕನ್ನೇ ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ್ ಕಳೆದ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ಕುಬರ್ ಪ್ರದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. 2019 ರಲ್ಲಿ ಕೇಂದ್ರ ಸರಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯಿದೆ ಬೆಂಬಲಿಸಿ ಶೈಲೇಶ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದರು. ಇದರಿಂದ ಸಿಟ್ಟಿಗೆದ್ದ ಮಂಗಳೂರು ಮೂಲದ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಆತನಿಗೆ ಬೆದರಿಕೆ ಹಾಕಿದ್ದರು. ಹಾಗಾಗಿ, ತನ್ನ ಫೇಸ್‌ಬುಕ್ ಖಾತೆಯನ್ನು ಶೈಲೇಶ್ ರದ್ದು ಮಾಡಿದ್ದರು. ಆದರೆ, 2020ರ ಫೆಬ್ರವರಿಯಲ್ಲಿ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೌದಿ ಅರೇಬಿಯಾ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಮಾಡಿದ್ದರು. ಎರಡನೇ ಬಾರಿ ತಪ್ಪು ಮಾಡಿದ್ದಾನೆಂದು ಸೌದಿ ಪೊಲೀಸರು ಶೈಲೇಶ್‌ನನ್ನು ಬಂಧಿಸಿದ್ದರು. ತಾನು ಮಾಡದ ತಪ್ಪಿಗೆ ಶೈಲೇಶ್ ಜೈಲು ಪಾಲಾಗಿದ್ದರು.
ಇತ್ತ ಗಂಡ ಜೈಲು ಸೇರಿದ ಅಸಲಿ ವಿಚಾರ ತಿಳಿದು ಮಂಗಳೂರಿನಲ್ಲಿ ಶೈಲೇಶ್ ಪತ್ನಿ ಕವಿತಾ ಪೊಲೀಸ್ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಮಂಗಳೂರು ಪೊಲೀಸರು ಫೇಸ್‌ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡಲು ಕೋರಿದ್ದರು. ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸುವಂತೆ ಕೋರಿ ಶೈಲೇಶ್ ಪತ್ನಿ ಕೇಂದ್ರ ಸರಕಾರಕ್ಕೂ ಮನವಿ ಸಲ್ಲಿಸಿದ್ದರು. ಮತ್ತೊಂದೆಡೆ, 2021ರಲ್ಲಿ ಹೈಕೋರ್ಟ್‌ಗೆ ಪೊಲೀಸರ ವಿಳಂಬ ತನಿಖೆಯ ಬಗ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಫೇಸ್ಬುಕ್ ಕಂಪನಿಗೆ ತರಾಟೆ ಮಾಡಿದೆ. ಹೈಕೋರ್ಟ್ ಸೂಚನೆಯಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ವಿಚಾರಣೆಗೆ ಖುದ್ದು ಹಾಜರಾಗಿದ್ದರು.
The Karnataka High Court on Wednesday warned Facebook that it would consider issuing an order to close down the social media giant’s activities in India following its alleged non-cooperation with the state police over investigation of the case of an imprisoned Indian citizen in Saudi Arabia.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm