ಬ್ರೇಕಿಂಗ್ ನ್ಯೂಸ್
15-06-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ತಿದ್ದುಪಡಿ- 2022 ಹೆಸರಲ್ಲಿ ಹಿಂದಿನ ಸರ್ಕಾರ ಕಾಯ್ದೆ ಜಾರಿಗೆ ತಂದಿತ್ತು. ಇದನ್ನು ರದ್ದು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್. ಕೆ ಪಾಟೀಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಸದನದಲ್ಲಿ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ತಿಂಗಳಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿದೆ.
ಇದಲ್ಲದೆ, ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ನಿರ್ಧರಿಸಿದೆ. ಇದರಿಂದ ರೈತರು ಹಾಗೂ ಎಪಿಎಂಸಿ ಅವಲಂಬಿತರಿಗೆ ನಷ್ಟವಾಗಿದೆ. ಈ ಹಿನ್ನಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಗೆ ಮಾರ್ಪಾಡುಗಳನ್ನು ಮಾಡಿ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಇದೇ ಶೈಕ್ಷಣಿಕ ಸಾಲಿನಲ್ಲಿಯೇ ವಿವಾದಿತ ಪಠ್ಯಗಳನ್ನು ಕೈಬಿಟ್ಟು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 6 ರಿಂದ 10 ನೇ ತರಗತಿಯ ಕೆಲವು ಪಠ್ಯಗಳನ್ನು ಬದಲಾವಣೆ ಮಾಡಲು ಸಂಪುಟ ಸಭೆ ನಿರ್ಧರಿಸಿದೆ. ಪಠ್ಯದಲ್ಲಿ ನೆಹರು ಮತ್ತು ಅಂಬೇಡ್ಕರ್ ಕುರಿತ ಪಠ್ಯ ಸೇರ್ಪಡೆ, ಹೆಡ್ಗೆವಾರ್, ಸೂಲಿಬೆಲೆ, ಗೋಳ್ವಲ್ಕರ್ ಮತ್ತಿತರ ಬಿಜೆಪಿ ಅವಧಿಯಲ್ಲಿ ಸೇರಿಸಲಾಗಿದ್ದ ಪಠ್ಯವನ್ನು ಹಿಂತೆಗೆಯಲು ನಿರ್ಧರಿಸಿದೆ. ಇದಲ್ಲದೆ, ಶಾಲೆಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಜತೆಗೆ ಸಂವಿಧಾನದ ಪೀಠಿಕೆಯನ್ನು ಕಡ್ಡಾಯ ಮಾಡಲಾಗಿದೆ.
The Karnataka cabinet on Thursday announced the decision to withdraw the anti-conversion law brought in by the previous BJP government in the state.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm