ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm