ಬ್ರೇಕಿಂಗ್ ನ್ಯೂಸ್
18-06-23 05:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.
ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.
ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂಧ್ ಗೆ ಕರೆ ನೀಡಿದೆ.
ಈ ಕುರಿತಾಗಿ ಕೆಸಿಸಿಐ ಮಾಧ್ಯಮ ಪ್ರಕಟಣೆಯನ್ನೂ ಹೊರಡಿಸಿದೆ. ಜೂನ್ 22 ರಂದು ಎಲ್ಲಾ ವಾಣಿಜ್ಯ ಚಟುವಟಿಕೆಗಳು, ಕೈಗಾರಿಕೆಗಳನ್ನು ಬಂದ್ ಮಾಡಬೇಕೆಂದು ಸಂಸ್ಥೆ ಕರೆ ನೀಡಿದೆ. ಅಸಹಜವಾಗಿ ಮಾಡಿರುವ ಈ ವಿದ್ಯುತ್ ದರ ಏರಿಕೆಯನ್ನು ಖಂಡಿಸಲು ಪ್ರತಿಭಟನೆ ರೂಪದಲ್ಲಿ ನಾವು ಬಂದ್ ಮಾಡ್ತಿರೋದಾಗಿ ಸಂಸ್ಥೆ ಹೇಳಿದೆ. ಇದಲ್ಲದೆ ಎಲ್ಲಾ ಎಸ್ಕಾಂಗಳೂ ಕೂಡಲೇ ಏರಿಕೆ ಮಾಡಿರುವ ದರವನ್ನು ಮೊದಲಿನ ಸ್ಥಿತಿಗೆ ತರಬೇಕು, ಪರಿಷ್ಕರಣೆ ಮಾಡಬೇಕು ಎಂದು ಸಂಘ ಆಗ್ರಹಿಸಿದೆ.
ಈ ಸಂಬಂಧ ಕಳೆದ ಎಂಟು ದಿನಗಳಿಂದ ಕರ್ನಾಟಕ ವಾಣಿಜ್ಯೋದ್ಯಮ ಸಂಘವು ಹಲವರನ್ನು ಸಂಪರ್ಕಿಸಿದೆ. ವಿದ್ಯುತ್ ದರ ಏರಿಕೆಯ ಪರಿಣಾಮಗಳ ಗಂಭೀರತೆಯನ್ನು ಮನವರಿಕೆ ಮಾಡಲು ಯತ್ನಿಸಿದೆ. ಆದರೆ, ಅಧಿಕಾರಿಗಳಿಂದಾಗಲೀ, ಸರ್ಕಾರದಿಂದಾಗಲೀ ಯಾವುದೇ ಪರಿಹಾರ ಸಿಕ್ಕಿಲ್ಲ. ಹೀಗಾಗಿ, ಬಂದ್ ಮಾಡೋದೊಂದೇ ಮಾರ್ಗ ಎಂದು ಸಂಘ ಹೇಳಿದೆ.
ವಾಣಿಜ್ಯೋದ್ಯಮ ಸಂಘದ ಎಲ್ಲಾ ಜಿಲ್ಲೆಗಳ ವಿಭಾಗಗಳೂ ಬಂದ್‌ಗೆ ಬೆಂಬಲ ನೀಡಿವೆ. ಗದಗ, ವಿಜಯಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟೆ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾಸನ, ಬಳ್ಳಾರಿ ಹಾಗೂ ಇತರ ಎಲ್ಲಾ ವಿಭಾಗಗಳ ಮುಖ್ಯಸ್ಥರೂ ಬಂದ್ ಕರೆಗೆ ಕೈ ಜೋಡಿಸಿದ್ದು, ಪ್ರತಿಭಟನೆ ನಡೆಸೋದಕ್ಕೂ ನಿರ್ಧರಿಸಿದ್ದಾರೆ.
The Karnataka Chamber of Commerce and Industry (KCC&I) has called for a state wide bandh on June 22 as a protest against the increased electricity charges by the Congress government. The union also said that they tried to inform the government about the impact on the new electricity charges but they did not receive any response and decided to call for a bundh.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm