ಬ್ರೇಕಿಂಗ್ ನ್ಯೂಸ್
19-06-23 02:16 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ 'ಗೃಹಜ್ಯೋತಿ' ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ಜೂನ್ 18ರ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ಸುಮಾರು 55 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ.
ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವುದು 'ಗೃಹಜ್ಯೋತಿ' ಯೋಜನೆ. ಜನರು ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಛೇರಿಗಳಲ್ಲಿಯೂ ಸಹ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.
ಯೋಜನೆ 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ಆದರೆ ಯೋಜನೆಗೆ ಫಲಾನುಭವಿಯಾಗಲು ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಅರ್ಜಿ ಸಲ್ಲಿಕೆ ಮಾಡಲು ಲಿಂಕ್;
'ಗೃಹಜ್ಯೋತಿ' ಯೋಜನೆ ಫಲಾನುಭವಿಯಾಗಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. https://sevasindhugs.karnataka.gov.in/ ಲಿಂಕ್ ಕ್ಲಿಕ್ ಮಾಡಿದರೆ ಅದರಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ವಿವರವಿದೆ. 'ಗೃಹಜ್ಯೋತಿ' ಕ್ಲಿಕ್ ಮಾಡಿದರೆ ಮುಂದಿನ ಪುಟ ತೆರದುಕೊಳ್ಳಲಿದೆ.
ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಈ ವೆಬ್‌ಸೈಟ್ ಮೊಬೈಲ್, ಡೆಸ್ಕ್‌ಟಾಪ್, ಲ್ಯಾಪ್ ಟಾಪ್‌ಗಳಲ್ಲಿಯೂ ಕಾರ್ಯ ನಿರ್ವಹಣೆ ಮಾಡಲಿದೆ. 'ಗೃಹಜ್ಯೋತಿ' ಯೋಜನೆ ಅಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಹಾಗೂ ಅಲ್ಪಕಾಲಾವಧಿಯಲ್ಲಿಯೇ ಬಹುತೇಕ ಅರ್ಜಿಗಳು ಸಲ್ಲಕೆಯಾಗುವ ಕಾರಣ ವಿದ್ಯುತ್ ಶಕ್ತಿ ಕಚೇರಿಗಳಲ್ಲಿಯೇ 'ಗೃಹಜ್ಯೋತಿ' ಯೋಜನೆಗೆ ವಿಶೇಷ ಕೌಂಟರ್ ತೆರೆಯಲಾಗಿದೆ. ಅಲ್ಲಿಗೆ ಭೇಟಿ ನೀಡಿ, ಸಹ ಅರ್ಜಿ ಸಲ್ಲಿಸಬಹುದು.
'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ID ಗಳ ಮಾಹಿತಿಗಳನ್ನು (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಒಂದು ವೇಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರೆ ಕರಾರು ಪತ್ರವನ್ನು ಸಹ ನೀಡಬೇಕು.
ಯಾವ-ಯಾವ ವಿವರಗಳು; ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕೇಳುವ ವಿವರಗಳು;
ಎಲ್ಲಾ ವಿವರ ಭರ್ತಿ ಮಾಡಿದ ಮೇಲೆ ಈ ಮೇಲಿನ ಖಾತೆ ಸಂಖ್ಯೆಯನ್ನು ಗೃಹ ಬಳಕೆಗೆ ಮಾತ್ರ ಬಳಸಲಾಗುತ್ತದೆ. ಒಂದು ವೇಳೆ ಗೃಹ ಬಳಕೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸಿದ್ದಲ್ಲಿ ಪ್ರಯೋಜನಗಳನ್ನು ಸ್ವಯಂಚಾಲಿತವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ನನಗೆ ತಿಳಿದಿದೆ ಮತ್ತು ನಾನು ಈಗಾಗಲೇ ಪಡೆದಿರುವ ಪ್ರಯೋಜನಗಳನ್ನು ಬಡ್ಡಿಯೊಂದಿಗೆ ಮರುಪಾವತಿಸಲು ಸಿದ್ಧನಿದ್ದೇನೆ. ನಾನು ಮೇಲೆ ಒದಗಿಸಿರುವ ಎಲ್ಲಾ ವಿವರಗಳು ನನಗೆ ತಿಳಿದಿರುವಂತೆ ಸರಿಯಾಗಿದೆ ಎಂದು ಈ ಮೂಲಕ ಧೃಢೀಕರಿಸುತ್ತೇನೆ. ಇದಕ್ಕೆ ಒಪ್ಪಿಗೆ ನೀಡಬೇಕು. ಬಳಿಕ ಮುಂದಿನ ಹಂತ ತೆರೆದುಕೊಳ್ಳಲಿದೆ.
ಸಹಾಯವಾಣಿ ಸಂಖ್ಯೆ; 'ಗೃಹಜ್ಯೋತಿ' ಯೋಜನೆಗೆ ಜನರು ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ತಾಂತ್ರಿಕ ಸಮಸ್ಯೆಗಳು ಎದುರಾದರೆ ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಛೇರಿ ಅಥವಾ 24x7 ಸಹಾಯವಾಣಿ 1912ಗೆ ಕರೆಮಾಡಬಹುದು.
ಯೋಜನೆಯಿಂದ ರಾಜ್ಯದ 2 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಈ ಯೋಜನೆಯು 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. 'ಗೃಹಜ್ಯೋತಿ' ಯೋಜನೆ ಫಲಾನುವಿಯಾಗಲು ಹಿಂದಿನ ಎಲ್ಲಾ ಬಾಕಿ ಬಿಲ್ ಪಾವತಿ ಮಾಡಬೇಕು. ಬಾಕಿ ಪಾವತಿ ಮಾಡಲು ಸೆಪ್ಟೆಂಬರ್ ತನಕ ಇಂಧನ ಇಲಾಖೆ ಅವಕಾಶ ನೀಡಿದೆ.
As the registration process for the much-awaited Gruha Jyothi scheme, under which eligible households will get free power up to 200 units, began on Sunday, a total of 55,000 consumers from across the State registered for it until 6 p.m. However, for many citizens, the first day of registration was slightly disappointing as the Seva Sindhu portal failed to open on mobiles and computers.
04-01-25 06:49 pm
Bangalore Correspondent
Gadag Car accident; ಹೈಸ್ಕೂಲ್ ವಿದ್ಯಾರ್ಥಿಗಳು ಚಲ...
04-01-25 01:28 pm
BJP MLC Dhananjaya Sarji: ಹೊಸ ವರ್ಷಕ್ಕೆ ಬಿಜೆಪಿ...
03-01-25 10:47 pm
ಮಂಗಳೂರು, ಶಿವಮೊಗ್ಗ ಸೇರಿ ಆರು ಸ್ಮಾರ್ಟ್ ಸಿಟಿ ಯೋಜ...
03-01-25 08:33 pm
ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಂದ ಹಣ ವಸೂಲಿ...
03-01-25 02:02 pm
04-01-25 06:01 pm
HK News Desk
ಉತ್ತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ; ಕೋವಿಡ್...
03-01-25 06:22 pm
ಅಮೆರಿಕದಲ್ಲಿ ಟ್ರಕ್ ನುಗ್ಗಿಸಿ ಭಯೋತ್ಪಾದಕ ಘಟನೆ ; ಐ...
03-01-25 11:57 am
ಸ್ವಿಜರ್ಲ್ಯಾಂಡಿನಲ್ಲಿ ಜನವರಿ 1ರಿಂದಲೇ ಬುರ್ಖಾ ನಿಷೇ...
02-01-25 06:20 pm
ಅಮೆರಿಕದಲ್ಲಿ ಭೀಕರ ಅಪಘಾತ ; ನ್ಯೂ ಇಯರ್ ಸಂಭ್ರಮದಲ್...
02-01-25 12:02 pm
05-01-25 02:13 pm
Mangalore Correspondent
Mangalore MCC Anand CL, Abdul Rauf: ಮಹಾನಗರ ಪಾ...
04-01-25 09:49 pm
Travel agency fraud, Muhammadiya, Haj, Mangal...
04-01-25 08:57 pm
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಂಸದ ಕ್ಯಾ....
03-01-25 10:14 pm
Mangalore Kambala: ಕಂಬಳದಲ್ಲಿ ಅನಗತ್ಯ ವಿಳಂಬ ತಪ್...
03-01-25 05:40 pm
04-01-25 11:31 am
Mangalore Correspondent
Madhugiri DySP Ramachandrappa Arrest, Video:...
03-01-25 11:02 pm
Sri Bhagavathi Co Operative Bank fraud, Manga...
03-01-25 09:26 pm
Belagavi Murder, Crime; ಕುಡಿಯಲು ಹಣಕ್ಕಾಗಿ ಪೀಡಿ...
02-01-25 11:00 pm
Mangalore crime, Kankandy Police: ಹಾಡಹಗಲೇ ಚೂರ...
02-01-25 10:12 pm