ಬ್ರೇಕಿಂಗ್ ನ್ಯೂಸ್
19-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್‌ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.
ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.
'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
CM Siddaramaiah warns of strict against against Moral Policing and attacks in state, says given orders to police department to take action. He spoke to media persons while handovering cheques to the families of Deceased in Communial Killings in Karnataka.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm