ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ಫಸ್ಟ್ ತೆಗೀಲಿ ; ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ, ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ ! 

19-06-23 07:20 pm       Bangalore Correspondent   ಕರ್ನಾಟಕ

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು. 

Karnataka Congress targets ruling BJP as pics of R Ashoka with drug case  accused surface | Deccan Herald

Undecided about contesting LS polls, ready to make way for others: Congress  MP D K Suresh | Deccan Herald

ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.

Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.