ಬ್ರೇಕಿಂಗ್ ನ್ಯೂಸ್
20-06-23 02:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.20: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ಸಿಎಂ ವಿವರವಾಗಿ ಚರ್ಚಿಸಿದ್ದಾರೆ.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್ ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.
ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿ ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕ್:
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಸುದ್ದಿ ಪೋಸ್ಟ್ ಮಾಡುವುದು ಅಥವಾ ಶೇರ್ ಮಾಡುವವರು ಕೊಂಚ ಎಚ್ಚರಿಂದ ಇರುವುದು ಒಳಿತು.
To curb fake news in the state, Chief Minister Siddaramaiah held a meeting with Home Minister Dr G Parameshwara at Vidhana Soudha on Tuesday and ordered officials to act strictly against people who are behind it. The move comes after a few Congress leaders complained of fake news doing rounds on social media against the government.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm