ಬ್ರೇಕಿಂಗ್ ನ್ಯೂಸ್
20-06-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.20 : ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆಜಿಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ ಎಂದರು.
ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನರು ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ಅವರು ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ. ಅದನ್ನು ಬಿಟ್ಟು ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ ಎಂದು ಕಿಡಿಕಾರಿದರು.
No free rice, Karnataka capable of buying it from other States, will make Karnataka hungry free says D K Shivakumar. Several BJP leaders were detained while protesting against the Karnataka government over Anna Bhagya Scheme. Union Health Minister Mansukh Mandaviya chaired a high-level meeting in Delhi to review public health preparedness to deal with heatwave conditions.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm