ಬ್ರೇಕಿಂಗ್ ನ್ಯೂಸ್
20-06-23 05:16 pm HK News Desk ಕರ್ನಾಟಕ
ಧಾರವಾಡ, ಜೂ.20 : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಸತತ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಟ್ಟಿದ್ದ ಟಾಸ್ಕ್‌ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಬಿಜೆಪಿಯಿಂದ ವೀಣಾ ಭರದ್ವಾಡ್ ಮೇಯರ್ ಆಗಿ ಹಾಗೂ ಉಪ ಮೇಯರ್ ಆಗಿ ಸತೀಶ್ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಬೇಕು ಎಂಬ ಕಾಂಗ್ರೆಸ್ ಕನಸು ಕಮರಿದಂತಾಗಿದೆ. ಶತಾಯಗತಾಯ ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಲು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಸಂತೋಷ್ ಲಾಡ್ ಅವರು ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರ ಕಾರ್ಯತಂತ್ರ ಕೊನೆಗೂ ಫಲಿಸಲಿಲ್ಲ.
ಕಾಂಗ್ರೆಸ್ ಪಕ್ಷ ಬಿಜೆಪಿ ಸದಸ್ಯರಿಗೆ ಆಸೆ, ಆಮಿಷಗಳನ್ನು ಒಡ್ಡಬಹುದು ಎಂದು ಬಿಜೆಪಿ ತನ್ನೆಲ್ಲಾ ಪಾಲಿಕೆ ಸದಸ್ಯರನ್ನು ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಿತ್ತು. ಚುನಾವಣೆ ದಿನವೇ ಅವರನ್ನು ದಾಂಡೇಲಿಯಿಂದ ನೇರವಾಗಿ ಧಾರವಾಡದ ಮಂದಾರ ಹೋಟೆಲ್‌ಗೆ ಕರೆತಂದು ಅಲ್ಲಿಂದ ನೇರವಾಗಿ ಪಾಲಿಕೆಗೆ ಕರೆತಂದಿತು. ಬಿಜೆಪಿ ಪಕ್ಷದ ಸದಸ್ಯರು ಅಡ್ಡ ಮತದಾನ ಮಾಡದಂತೆ ಅವರಿಗೆ ವಿಪ್ ಕೂಡ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ಬಿಜೆಪಿ, ಎಂಐಎಂ ಹಾಗೂ ಪಕ್ಷೇತರ ಸದಸ್ಯರು ಕೂಡ ಸಭೆಗೆ ಹಾಜರಾಗಿದ್ದರು.
ಎಲ್ಲಾ ಸದಸ್ಯರು ಸಭೆಗೆ ಹಾಜರಾಗುತ್ತಿದ್ದಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಪ್ರಭಾರಿ ಆಯುಕ್ತ ನಿತೇಶ್ ಪಾಟೀಲ್ ಅವರು ಸಭೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. 46 ಜನ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಪರ ಮತ ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದರು. ಆ ಮೂಲಕ ಪೂರ್ಣ ಬಹುಮತ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೇ ಬಂದಿದ್ದರಿಂದ ಆಯುಕ್ತರು ಬಿಜೆಪಿ ಅಭ್ಯರ್ಥಿಗಳನ್ನೇ ಮೇಯರ್ ಹಾಗೂ ಉಪಮೇಯರ್ ಎಂದು ಘೋಷಣೆ ಮಾಡಿದರು.
ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪ್ರದೀಪ್ ಶೆಟ್ಟರ್, ಎಸ್‌ವಿ ಸಂಕನೂರು ಕೂಡ ಆಗಮಿಸಿದ್ದರು. ಕಾಂಗ್ರೆಸ್ ಸದಸ್ಯರು ಕೂಡ ಪಾಲಿಕೆಗೆ ಬಂದು ಪೈಪೋಟಿ ನೀಡಿದರು. ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾವಣೆಗೆ ಆಗಮಿಸಿದ್ದರು.
ಕೊನೆಗೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಮತಗಳು ಬಂದಿದ್ದರಿಂದ 22ನೇ ಅವಧಿಗೆ ವೀಣಾ ಭರದ್ವಾಡ ಅವರು ಮೇಯರ್ ಹಾಗೂ ಹಾಗೂ ಸತೀಶ್ ಹಾನಗಲ್ ಅವರು ಉಪ ಮೇಯರ್ ಆಗಿ ಆಯ್ಕೆಯಾದರು.
BJP won the Hubballi-Dharwad Mayor and deputy Mayor elections held on Tuesday. BJP’s Veena Bharadwad was elected the Mayor and Satish Hangal was elected as Deputy Mayor.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm