ಬ್ರೇಕಿಂಗ್ ನ್ಯೂಸ್
21-06-23 05:34 pm HK News Desk ಕರ್ನಾಟಕ
ಮಂಡ್ಯ, ಜೂನ್ 21: ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇನ್ನು ಇವರನ್ನು ಮಿಲ್ಟ್ರಿ ಮ್ಯಾನ್ ಎಂತಲೂ ಕರೆಯಲಾಗುತ್ತದೆ. ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯಕ್ಕೆ ಬಂದು ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇನ್ನು 2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ನಿಯೋಜನೆ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಸಿಕ್ಕಿದೆ. ಅಂತೆಯೇ ಠಾಣೆಯಲ್ಲಿ ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ.
ಮಿಲ್ಟ್ರಿ ಮ್ಯಾನ್ ಅಪ್ಪನೇ ಎಲ್ಲಕ್ಕೂ ಸ್ಫೂರ್ತಿ ;
ತಂದೆ ಕೈಯಿಂದ ಅಧಿಕಾರ ಪಡೆದ ಪಿಎಸ್ಐ ವರ್ಷಾ, ನನ್ನ ತಂದೆಯೇ ನನ್ನ ಜೀವನದ ಹೀರೋ. ಅವರು ಮಾಡುತ್ತಿದ್ದ ಕೆಲಸವೇ ನನಗೆ ಪ್ರೇರಣೆ. 16 ವರ್ಷಗಳ ಕಾಲ ನನ್ನ ತಂದೆ ದೇಶ ಸೇವೆಯಲ್ಲಿ ತೊಡಗಿದ್ರು. 2010 ರಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಕರ್ತವ್ಯ ನಿಷ್ಠೆ ನನಗೆ ಸ್ಪೂರ್ತಿ. ನಾನು ಕೂಡ ಅವರಂತೆ ಉತ್ತಮ ಕೆಲಸ ನಿರ್ವಹಿಸಿ ಒಳ್ಳೆ ಹೆಸರು ಸಂಪಾದಿಸುವೆ. ನೊಂದ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ. ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸೆಂಟ್ರಲ್ ಪೊಲೀಸ್ ಠಾಣೆಗೆ ನಾನು ಪಿಎಸ್ಐಯಾಗಿ ನೇಮಕಗೊಂಡಿದ್ದೇನೆ. ಇಂದು ನನ್ನ ಮನಸ್ಸಿಗೆ ತುಂಬಾ ಖುಷಿಯಾಗಿದೆ ಎಂದು ವರ್ಷಾ ಭಾವುಕರಾದ್ರು.
In a rare instance, a woman police sub-inspector (PSI) took charge of Mandya Central police station on Wednesday from her own father. It was a proud moment for PSI Venkatesh when his own daughter came as a PSI to the station where he was on duty. He had been working as a PSI at the Mandya Central police station for the past one year.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm