ಬ್ರೇಕಿಂಗ್ ನ್ಯೂಸ್
21-06-23 11:15 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ.
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದವು. ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್‌ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಸದ್ಯ 1977ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-20ರಲ್ಲಿ ಉಲ್ಲೇಖಿಸಿದಂತೆ 52 ಅಭ್ಯರ್ಥಿಗಳು ದುರ್ನಡತೆ ತೋರಿದ್ದಾರೆ. ನಕಲಿ ವ್ಯಕ್ತಿಗಳು, ಸುಳ್ಳು ಹೇಳಿಕೆ, ವಾಸ್ತವ ಮಾಹಿತಿ ಮರೆಮಾಚಿರುತ್ತಾರೆ. ನೇಮಕಾತಿ ಸಮಿತಿ ನೀಡಿರುವ ಸೂಚನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಉಲ್ಲಂಘಿಸಿ ನಕಲು ಮಾಡಿರುವುದನ್ನು ದುರ್ನಡತೆ ಎಂದು ನಿರ್ಧರಿಸಲಾಗಿದೆ ಎಂದು ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ
ಡಿಬಾರ್ ಆದ ಅಭ್ಯರ್ಥಿಗಳಲ್ಲಿ 10 ಜನ ಕಾನ್‌ಸ್ಟೇಬಲ್‌ಗಳು ಸಹ ಇದ್ದಾರೆ. ಇದೀಗ ಅವರ ಪೊಲೀಸ್ ಸೇವೆಗೂ ಕುತ್ತು ಬಂದಿದೆ. ಅಲ್ಲದೆ, 402 ಎಸ್ಎಐ ಹುದ್ದೆಗಳ ನೇಮಕಾತಿಗೂ ಇವರು ಅರ್ಜಿ ಸಲ್ಲಿಸಿದ್ದರು. ದೈಹಿಕ ಪರೀಕ್ಷೆ ಮುಗಿದಿದ್ದು, ಲಿಖಿತ ಪರೀಕ್ಷೆಯಿಂದ ಅಂಥವರನ್ನ ಹೊರಹಾಕಲಾಗಿದೆ
ಡಿಬಾರ್ ಆದ ಅಭ್ಯರ್ಥಿಗಳು:
ಎಸ್. ಜಾಗೃತ್, ಬಿ. ಗಜೇಂದ್ರ, ಸೋಮನಾಥ ಮಲ್ಲಿಕಾರ್ಜುನಯ್ಯ ಹಿರೇಮಠ, ಎಚ್.ಯು. ರಘುವೀರ್, ಎಂ.ಸಿ. ಚೇತನ್‌ಕುಮಾರ್, ಬಿ.ಸಿ. ವೆಂಕಟೇಶ್ ಗೌಡ, ಎ.ಪಿ. ಮನೋಜ್, ಜಿ.ಆರ್. ಮಂಜುನಾಥ್, ಪಿ. ಸಿದ್ದಲಿಂಗಪ್ಪ, ಎಸ್.ಮಮತೇಶ್ ಗೌಡ, ಎಚ್. ಯಶವಂತ್‌ಗೌಡ, ಸಿ.ಎಂ.ನಾರಾಯಣ, ಸಿ.ಎಸ್. ನಾಗೇಶ್ ಗೌಡ, ಆರ್. ಮಧು, ಸಿ. ಯಶವಂತ ದೀಪ್, ಸಿ.ಕೆ. ದಿಲೀಪ್‌ಕುಮಾರ್, ರಚನ ಹಣಮಂತ್, ಜಿ. ಶಿವರಾಜ್, ಸಿ. ಪ್ರವೀಣ್‌ಕುಮಾರ್, ಕೆ. ಸೂರ್ಯನಾರಾಯಣ, ಸಿ.ಎಂ. ನಾಗರಾಜ್, ಜಿ.ಸಿ. ರಾಘವೇಂದ್ರ, ಬೀರಪ್ಪ ಮೇತಿ, ಎಚ್. ಮೋಹನ್‌ಕುಮಾರ್, ಎನ್. ದಿಲೀಪ್‌ಕುಮಾರ್, ದರ್ಶನ್‌ಗೌಡ, ಲಕ್ಕಪ್ಪ ರಾವುತಪ್ಪ, ಎಚ್.ಬಿ. ಹರೀಶ್, ಜೆ. ಕುಶಾಲ್‌ಕುಮಾರ್, ವೀರೇಶ್, ಎನ್. ಚೇತನ್, ಕೆ. ಪ್ರವೀಣ್‌ಕುಮಾರ್, ಅರುಣ್‌ಕುಮಾರ್, ವಿಶಾಲ್, ಎಚ್.ವಿ. ಸುನೀಲ್, ಎಚ್.ಎನ್. ದೇಸಾಯಿ, ಶ್ರೀಧರ್, ಶಾಂತಿಬಾಯಿ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ಸುಪ್ರೀಯ ಹುಂಡೆಕರ್, ಪ್ರಭು ಇಟ್ಟಗರ್, ವಿಜಯಕುಮಾರ್ ಪೂಜಾರಿ, ಇಸ್ಮಾಲ್ ಖಾದಿರ್, ಯಶವಂತ ಮಾನೆ, ಎಸ್. ಶರಣಪ್ಪ ಪಾಟೀಲ್, ಬಿ. ಜೋಗೂರ್, ಸೋಮನಾಥ್, ಶ್ರೀಮಂತ ಸತ್ತಾಪುರ್, ರವಿರಾಜ್, ಪೀರಪ್ಪ ಮತ್ತು ಶ್ರೀಶೈಲಾ ಡಿಬಾರ್ ಆದ ಅಭ್ಯರ್ಥಿಗಳು.
PSI scam 52 candidates permanently debared by DGP Kamal Pant.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm