ಬ್ರೇಕಿಂಗ್ ನ್ಯೂಸ್
22-06-23 08:27 pm HK News Desk ಕರ್ನಾಟಕ
ಬೆಂಗಳೂರು, ಜೂನ್ 22: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ವಹಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸುದ್ದಿಗಾರರ ಜತೆ ಮಾತನಾಡಿದ ಡಾ.ಅಲೋಕ್ ಮೋಹನ್, ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಲಹೆ-ಸೂಚನೆ ನೀಡಲಾಗಿದೆ.
ಠಾಣೆಗಳಿಗೆ ಬರುವ ಜನರೊಂದಿಗೆ ಪೊಲೀಸರು ಸೌಜನ್ಯಯುತವಾಗಿ ವರ್ತಿಸಬೇಕು. ಈಗಾಗಲೇ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಮತ್ತು ಹೆಸರು ಸಮೇತ ಫಲಕಗಳ ಅಳವಡಿಕೆಗೆ ಆದೇಶಿಸಲಾಗಿದೆ. ತಿಂಗಳಲ್ಲಿ ಅಥವಾ ವಾರದಲ್ಲಿ ಒಮ್ಮೆಯಾದರೂ ಠಾಣೆಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಎಸ್‌ಪಿಗಳಿಗೆ, ನಗರದ ಡಿಸಿಪಿ ಮತ್ತು ಎಸಿಪಿಗಳಿಗೆ ಸಹ ಸೂಚಿಸಲಾಗಿದೆ.
ಕೆಲವು ಪೊಲೀಸ್ ಠಾಣೆಗಳಲ್ಲಿ ನಾಮಫಲಕ ಹಾಕದ ಬಗ್ಗೆ ದೂರುಗಳು ಬಂದಿವೆ. ಈ ಉದಾಸೀನತೆ ಮುಂದುವರಿದರೇ ಅಶಿಸ್ತು ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ನಾನು ಸಹ ಆಯ್ದ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತೇನೆ ಎಂದು ಡಿಜಿಪಿ ಡಾ. ಅಲೋಕ್ ಮೋಹನ್, ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಜಂಟಿ ಆಯುಕ್ತರಾದ ಡಾ.ಎಸ್.ಡಿ. ಶರಣಪ್ಪ ಮತ್ತು ಎಂ.ಎನ್. ಅನುಚೇತ್ ಸೇರಿದಂತೆ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
Treat public coming to Police station with respect, DCPs, SPs in Karnataka should visit one police station every day says DG Alok Mohan. I too will give surprise visits to police station any officer found irresponsible in thier work strict action will be implemented he added.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm