ಬ್ರೇಕಿಂಗ್ ನ್ಯೂಸ್
22-06-23 10:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 22: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು, ಹೌದು, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದಾಗಿ ಅಮೆರಿಕ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲೇ ಅಲ್ಲಿನ ಸರ್ಕಾರ ಈ ಘೋಷಣೆ ಮಾಡಿದೆ. ಇದರೊಂದಿಗೆ, ಕನ್ನಡಿಗರ ಬಹುದಿನಗಳ ಕನಸೊಂದು ನನಸಾಗುವ ಕಾಲ ಸನ್ನಿಹಿತವಾಗಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದ್ದಾರೆ.
ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಿದೆ. ಅದೇ ರೀತಿ ಭಾರತ ಸಿಯಾಟಲ್‌ನಲ್ಲಿ ಕಚೇರಿ ತೆರೆಯಲಿದ್ದು, ಜನರ ನಡುವಿನ ಬಾಂಧವ್ಯ ಹೆಚ್ಚಳಕ್ಕೆ ನೆರವಾಗಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1,25,000 ವೀಸಾಗಳನ್ನು ನೀಡಿದೆ. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷವೊಂದರಲ್ಲೇ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಅಮೆರಿಕದಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿ ಭಾರತೀಯ ವಿದ್ಯಾರ್ಥಿ ಸಮುದಾಯ ಹೊರಹೊಮ್ಮಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ಅಮೆರಿಕ ಉದ್ದೇಶಿಸಿದೆ. ಭಾರತವು 2023 ರಲ್ಲಿ ಸಿಯಾಟಲ್‌ನಲ್ಲಿ ದೂತಾವಾಸ ಕಚೇರಿ ತೆರೆಯುವುದನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.
The United States will open two new consulates in Bengaluru and Ahmedabad, to boost people-to-people relationships, a senior White House official said. The official said the US issued a record 125,000 visas to Indian students last year. Indian students are set to become the largest foreign student community in the United States with a 20 per cent increase last year alone, the senior administration official said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm