ಬ್ರೇಕಿಂಗ್ ನ್ಯೂಸ್
24-06-23 12:55 pm HK News Desk ಕರ್ನಾಟಕ
ಬಳ್ಳಾರಿ, ಜೂನ್ 24: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡರೂ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜಿನಾಮೆ ಸಲ್ಲಿಸಿರಲಿಲ್ಲ. ಈಗ ಹೊಸಬರ ನೇಮಕ ಖಚಿತವಾಗುತ್ತೆ, ಇವರನ್ನು ಕಿತ್ತು ಹಾಕುತ್ತಾರೆ ಎನ್ನುವಾಗ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದೆ. ಬಳ್ಳಾರಿಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ ಎಂಬುದಾಗಿ ಟಿವಿ ಮಾಧ್ಯಮಗಳು ವರದಿ ಮಾಡಿವೆ. ಆದರೆ ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದ ನಳಿನ್ ಕುಮಾರ್ ಕಟೀಲ್, ಈಗಾಗಲೇ ನನ್ನ ಅವಧಿ ಮುಗಿದಿರುವುದರಿಂದ ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ. ರಾಜ್ಯಾಧ್ಯಕ್ಷನಾಗಿ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲೇ ನಾನು ರಾಜೀನಾಮೆಯನ್ನೂ ನೀಡಿದ್ದೆ ಎಂದು ಹೇಳಿದ್ದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ ಬೇಡಿಕೆ ಇಟ್ಟ ಪ್ರಶ್ನೆಗೆ ಉತ್ತರಿಸಿ, ಸೋಮಣ್ಣ ಹಿರಿಯ ನಾಯಕರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದು ತಪ್ಪಲ್ಲ ಎಂದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಪಕ್ಷ ನೇಮಕ ಮಾಡಲಿದೆ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿದ್ದಾರೆಂದು ಸುದ್ದಿ ಬಿತ್ತರವಾದ ಬೆನ್ನಲ್ಲೇ ರಾಜ್ಯಾಧ್ಯಕ್ಷರ ಹೆಸರಲ್ಲಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಣೆ ನೀಡಿದ್ದು ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ. ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ನಳಿನ್ ಕುಮಾರ್ ಹೆಸರಿನಲ್ಲಿ ಮಾಧ್ಯಮ ಸಂಚಾಲಕ ಪ್ರಕಟಣೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಒದ್ದಾಟ ನಡೆಸುತ್ತಿದೆ. ಇಂದು, ನಾಳೆ ಬದಲಾವಣೆ ಎನ್ನುವ ಸುದ್ದಿ ದಿನವೂ ಹರಿದಾಡುತ್ತಿದ್ದು ಹೈಕಮಾಂಡ್ ಇಷ್ಟು ದುರ್ಬಲ ಆಗಿದ್ದೇಕೆ ಎನ್ನುವ ಮಾತು ಕಾರ್ಯಕರ್ತರಿಂದ ಕೇಳಿಬರುತ್ತಿದೆ.
Nalin Kumar Kateel resigns as BJP Karnataka President is Fake News, Never made such statement says Kateel. Dakshina Kannada MP Nalin Kumar Kateel has declared that he had resigned from his post of Karnataka State President of the BJP. Addressing reporters in Ballari on Saturday, Kateel said that he had submitted his resignation to the party high command, taking moral responsibility for the defeat of the party in the Karnataka Assembly elections in May which is fake he added. I only stated that i am taking the sole responsibility of losing elections in Karnataka he added.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm