ಬ್ರೇಕಿಂಗ್ ನ್ಯೂಸ್
26-06-23 11:02 pm HK News Desk ಕರ್ನಾಟಕ
ಕೋಲಾರ, ಜೂನ್ 26: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿ ಭಾಗದ ರಾಕ್ ವ್ಯಾಲಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಭಾನುವಾರ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಮೂವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರು ಮಹಿಳೆಯನ್ನು ರಕ್ಷಿಸಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, 'ಈ ಮಹಿಳೆಯರನ್ನು ಹೈದರಾಬಾದ್ ಮೂಲದ ವಿಜಯ್ ಎಂಬಾತ ಆಂಧ್ರದ ವಿವಿಧೆಡೆಯಿಂದ ಕರೆತಂದು ರೆಸ್ಟೋರೆಂಟ್ ಮಾಲೀಕರೊಂದಿಗೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಜನರನ್ನು ವಶಕ್ಕೆ ಪಡೆದು ತನಿಖೆಗೊಳಪಡಿಸಿದೆವು. ರೆಸ್ಟೋರೆಂಟ್ ಮಾಲೀಕ, ಮ್ಯಾನೇಜರ್, ಸಪ್ಲೈಯರ್, ರಿಸೆಪ್ಷನಿಸ್ಟ್ ಹಾಗೂ ಮಹಿಳೆಯರನ್ನು ಕರೆತಂದಿದ್ದ ಏಜೆಂಟ್ ಸೇರಿದಂತೆ 7 ಮಂದಿ ವಿರುದ್ಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏಜೆಂಟ್ ವಿಜಯ್, ಮಂಜುನಾಥ್, ಆಂಜಪ್ಪ, ಸತೀಶ್ ಎಂಬುವರನ್ನು ಬಂಧಿಸಿದ್ದು, ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಸೇರಿದಂತೆ ಮೂವರು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಲಾಗಿದೆ' ಎಂದರು.
ದಾಳಿ ವೇಳೆ 5,56,300 ನಗದು, ಸುಮಾರು 2 ಕೋಟಿ ಮೌಲ್ಯದ 10 ಐಷಾರಾಮಿ ಕಾರುಗಳು ಹಾಗೂ 14 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಹೇಳಿದರು.
ಮಾನವ ಕಳ್ಳಸಾಗಣೆ ನಿಯಂತ್ರಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಲಾರ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಭೈರ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈರಾಕೂರು ಹೋಬಳಿ ಎಚ್.ಬೈಯಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಸುಮಾರು ಏಳೆಂಟು ಎಕರೆ ಪ್ರದೇಶದಲ್ಲಿ ಈ ರೆಸಾರ್ಟ್ ಇದೆ. ಆವರಣದಲ್ಲಿರುವ ರಾಕ್ ವ್ಯಾಲಿ ಬಾರ್ ಅಂಡ್ ರೆಸ್ಟೋರೆಂಟ್ ಕಟ್ಟಡದ ಕೊಠಡಿಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ' ಎಂದು ತಿಳಿಸಿದರು.
ಇಲ್ಲಿ ವೇಶ್ಯಾವಾಟಿಕೆ ಜೊತೆಗೆ ಡ್ಯಾನ್ಸ್ ಹಾಗೂ ಮೋಜು ಮಸ್ತಿ ನಡೆಯುತಿತ್ತು. ವಿಜಯವಾಡ, ಚಿತ್ತೂರು, ವಿಶಾಖಪಟ್ಟಣದಿಂದ ಮಹಿಳೆಯರನ್ನು ಕರೆತರಲಾಗಿತ್ತು. ಇವರಲ್ಲಿ ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಕಿಂಗ್‌ಪಿನ್. ಸತೀಶ್ ಎಂಬಾತ ಪಾರ್ಟಿ ಆಯೋಜಿಸಿದ್ದ. ಮಹಿಳೆಯರೆಲ್ಲಾ ಸುಮಾರು 20, 21, 24, 30 ವರ್ಷ ವಯಸ್ಸಿನವರು. ಅವರನ್ನು ಸಖಿ ಕೇಂದ್ರದಲ್ಲಿ ಇರಿಸಲಾಗಿದೆ.
Prostitution Racket Raid at Kolar by Police at Rock Valley Resort, six girls saved, four arrested, luxury cars worth cores seized by Police.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm