ಬ್ರೇಕಿಂಗ್ ನ್ಯೂಸ್
27-06-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕಳೆದ ಬಾರಿ ಬಿಜೆಪಿ ಸರಕಾರವನ್ನು ಒಂದು ಹಂತಕ್ಕೆ ಅಲುಗಾಡಿಸಿದ್ದ ಬಿಟ್ ಕಾಯಿನ್ ಹಗರಣದ ಬಗ್ಗೆ ಮರು ತನಿಖೆ ಮಾಡಲು ಕಾಂಗ್ರೆಸ್ ಸರಕಾರ ನಿರ್ಧರಿಸಿದ್ದು, ಇಡೀ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ಮುಂದಾಗಿದೆ. ಈ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎನ್ನುವ ಮಾಹಿತಿ ಲಭಿಸಿದೆ.
ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಬಿಟ್ ಕಾಯಿನ್ ಹಗರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ಡಿಜಿಪಿ ಅಲೋಕ್ ಮೋಹನ್ ಅವರಿಗೆ ಪತ್ರ ಬರೆದಿದ್ದಾರೆ. ಎರಡು ದಿನಗಳ ಹಿಂದೆ ಈ ಹಗರಣವನ್ನು ಮರು ತನಿಖೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದರು. ಗೃಹ ಸಚಿವರ ಪ್ರಸ್ತಾಪಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
2019-2020ರಲ್ಲಿ ಬೆಳಕಿಗೆ ಬಂದಿದ್ದ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಸರಕಾರ ಪ್ರಮುಖ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಹಗರಣದ ಪ್ರಮುಖ ಸೂತ್ರಧಾರಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಮುಂದಿಟ್ಟು ಕೋಟ್ಯಂತರ ರೂಪಾಯಿ ಲೂಟಿ ಮಾಡಿದ್ದಾರೆ ಎನ್ನಲಾಗಿತ್ತು. 2020-21ರಲ್ಲಿ ಭಾರೀ ಸದ್ದು ಮಾಡಿದ್ದ ಪ್ರಕರಣವನ್ನು ಆನಂತರ, ಸದ್ದಿಲ್ಲದೆ ಮುಚ್ಚಿ ಹಾಕಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಪ್ರಕರಣದಲ್ಲಿ ಬಸವರಾಜ ಬೊಮ್ಮಾಯಿ ಪಾತ್ರವೇನು ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳು ಯಾಕೆ ಮೌನ ವಹಿಸಿವೆ. ಎನ್ಐಎ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾಕೆ ತನಿಖೆ ನಡೆಸಿಲ್ಲ. ಕೇಂದ್ರಕ್ಕೆ ಯಾಕೆ ವರದಿ ಕೊಟ್ಟಿಲ್ಲ ಎಂದು ಕೇಳಿದ್ದರು.
5 ಸಾವಿರ ಕೋಟಿ ಲೂಟಿ ಮಾಡಿದ್ನಾ ಶ್ರೀಕಿ ?
ಎಷ್ಟು ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು. ಅವುಗಳ ಮೌಲ್ಯ ಎಷ್ಟು ? ಕರ್ನಾಟಕದಲ್ಲಿ ಯಾರೆಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದ್ದ ಸುರ್ಜೇವಾಲ, ಅಮೆರಿಕದ ವೇಲ್ ಅಲರ್ಟ್ಸ್ ಮಾಹಿತಿ ಪ್ರಕಾರ, ಬಿಟ್ ಫಿನಾನ್ಸ್ ಸಂಸ್ಥೆಯ ಒಂದರಿಂದಲೇ 5240 ಕೋಟಿ ಮೌಲ್ಯದ 14682 ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿದೆ ಎನ್ನಲಾಗುತ್ತಿದೆ. ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ 2020ರ ಡಿಸೆಂಬರ್ 1 ಮತ್ತು 2021ರ ಎಪ್ರಿಲ್ 14ರಂದು ಇವನ್ನು ಕರೆನ್ಸಿ ರೂಪಕ್ಕೆ ವರ್ಗಾವಣೆ ಮಾಡಲಾಗಿತ್ತು ಎನ್ನುವ ಮಾಹಿತಿಯಿದೆ. ಐದು ತಿಂಗಳ ಬಳಿಕ ಇಂಟರ್ಪೋಲ್ ಘಟಕಕ್ಕೆ ಕರ್ನಾಟಕ ಸರಕಾರ ಮಾಹಿತಿ ನೀಡಿತ್ತು. ಆದರೆ ಅಷ್ಟರಲ್ಲಿ ಶ್ರೀಕಿಯನ್ನು ಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಶ್ರೀಕಿಯನ್ನು ಎಪ್ರಿಲ್ 17ರಂದು ಬಿಡುಗಡೆ ಮಾಡಿದ್ದರೆ, ಎಪ್ರಿಲ್ 24ರಂದು ಇಂಟರ್ ಪೋಲ್ ಗೆ ಮಾಹಿತಿ ನೀಡಲಾಗಿತ್ತು ಎಂದೂ ಹೇಳಿದ್ದರು.
ತನಿಖೆ ಮುಚ್ಚಿ ಹಾಕಿತ್ತಾ ಬಿಜೆಪಿ ಸರ್ಕಾರ ?
2021ರ ಜನವರಿಯಲ್ಲಿ 9 ಕೋಟಿ ರೂ. ಮೌಲ್ಯದ 31 ಬಿಟ್ ಕಾಯಿನ್ ಗಳನ್ನು ಶ್ರೀಕಿ ಖಾತೆಯಿಂದ ಜಪ್ತಿ ಮಾಡಿರುವುದಾಗಿ ಬೆಂಗಳೂರು ಪೊಲೀಸರು ತನಿಖೆಯ ಸಂದರ್ಭದಲ್ಲಿ ತಿಳಿಸಿದ್ದರು. ಆನಂತರ, ಯಾವುದೇ ಬಿಟ್ ಕಾಯಿನ್ ಗಳನ್ನು ಜಪ್ತಿ ಮಾಡಿಲ್ಲ ಎಂದು ಆಗಿನ ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದರು. ಆದರೆ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ, ಅಲ್ಲಿಂದ 11.55 ಕೋಟಿ ರೂ.ವನ್ನು ಇತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಶ್ರೀಕಿ ಮತ್ತು ಇತರ ಸ್ವಯಂಸೇವಾ ಸಂಸ್ಥೆಗಳ 14 ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಿ 1.44 ಕೋಟಿ ರೂ. ಜಪ್ತಿ ಮಾಡಿದ್ದರು.
ಸರ್ಕಾರದ ಅಧಿಕೃತ ಪೋರ್ಟಲ್ ಗಳನ್ನು ಹ್ಯಾಕ್ ಮಾಡಿ, ಅದರಲ್ಲಿನ ಹಣವನ್ನು ಸ್ವಯಂಸೇವಾ ಸಂಸ್ಥೆಗಳಾದ ನಾಗಪುರದ ಉದಯ್ ಗ್ರಾಮ ವಿಕಾಸ ಸಂಸ್ಥೆ, ಉತ್ತರ ಪ್ರದೇಶದ ನಿಮ್ಮಿ ಎಂಟರ್ ಪ್ರೈಸಸ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದ್ದ. ಆನಂತರ, ಎನ್ ಜಿಓ ಕಡೆಯಿಂದ ಮಾರಾಟಗಾರ ಮತ್ತು ಖರೀದಿದಾರ ನೆಪದಲ್ಲಿ ಶ್ರೀಕಿ ಹಣವನ್ನು ಸ್ವೀಕರಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದಲ್ಲದೆ, ಬಿಟ್ ಕಾಯಿನ್ ವರ್ಗಾವಣೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು. ಇದರ ಪತ್ತೆಗೆ ವಿಧಿವಿಜ್ಞಾನ ತಜ್ಞರಿಂದ ವಿಶ್ಲೇಷಣೆ ನಡೆಸುವ ಅಗತ್ಯವಿದೆ ಎಂದು ಸಿಐಡಿ ಅಧಿಕಾರಿಗಳು ಸರಕಾರಕ್ಕೆ ವರದಿ ಕೊಟ್ಟಿದ್ದರು. ಆದರೆ ಬಿಜೆಪಿ ರಾಜ್ಯ ಸರಕಾರ ಪೂರಕ ತನಿಖೆಗೆ ಅನುಮತಿ ನೀಡಿರಲಿಲ್ಲ.
ರಾಜಕಾರಣಿಗಳು, ಅಧಿಕಾರಿ ಪುತ್ರರು ಭಾಗಿ
ಬಿಟ್ ಕಾಯಿನ್ ಹಗರಣದಲ್ಲಿ ಆಯಕಟ್ಟಿನ ಇಲಾಖೆಯಲ್ಲಿದ್ದ ಅಧಿಕಾರಿಗಳ ಪುತ್ರರು, ಪೊಲೀಸ್ ಅಧಿಕಾರಿಗಳ ಪುತ್ರರು, ಪ್ರಭಾವಿ ರಾಜಕಾರಣಿಗಳು, ಅವರ ಆಪ್ತರು ಶಾಮೀಲಾಗಿದ್ದರು ಅನ್ನುವ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ವಕ್ತಾರ ಕೆ.ಲಕ್ಷ್ಮಣ್ ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಅವರ ಆಪ್ತರು ಎನ್ನಲಾದ ಪ್ರಸೀದ್ ಶೆಟ್ಟಿ ಎಂಬ ಇಬ್ಬರ ಹೆಸರನ್ನೂ ಹೇಳಿದ್ದರು. ಶ್ರೀಕಿ ದಕ್ಷಿಣ ಕನ್ನಡ ಮೂಲದವನಾಗಿದ್ದು, ಆತನಿಗೂ ಇವರಿಗೂ ನಂಟು ಇದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹ ಮಾಡಿದ್ದರು. ಆಗ ಮುಚ್ಚಿಹೋಗಿದ್ದ ತನಿಖೆಯನ್ನು ಇದೀಗ ಕಾಂಗ್ರೆಸ್ ಸರಕಾರ ಕೈಗೆತ್ತಿಕೊಂಡಿದ್ದು, ಅಮೂಲಾಗ್ರ ತನಿಖೆ ನಡೆಸಿದಲ್ಲಿ ಬಿಜೆಪಿ ಸರಕಾರದಲ್ಲಿ ಪ್ರಮುಖ ಹುದ್ದೆಯಲ್ಲಿದ್ದವರೆಲ್ಲ ಸಿಕ್ಕಿಬೀಳುವ ಸಾಧ್ಯತೆಯಿದೆ.
The Chief Minister of Karnataka, Siddaramaiah made an announcement on Tuesday regarding the government's decision to initiate an investigation into an alleged Bitcoin scam that has implicated several leaders from the previous BJP government.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm