ಬ್ರೇಕಿಂಗ್ ನ್ಯೂಸ್
28-06-23 01:24 pm HK News Desk ಕರ್ನಾಟಕ
Photo credits : ANI news
ಬೆಂಗಳೂರು, ಜೂನ್ 28: ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಮಾಡಿರುವ ಅಧಿಕಾರಿಗಳ ಮನೆ, ಫಾರ್ಮ್ ಹೌಸ್, ಕಚೇರಿಗಳ ಮೇಲೆ ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಬ್ಬರು ಕೃಷಿ ಇಲಾಖೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿದ್ಯಾಗಿರಿಯಲ್ಲಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯ ನಗರ ಯೋಜನಾ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಅವರಿಗೆ ಸೇರಿದ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ಅಬಕಾರಿ ಇಲಾಖೆ ನಿರೀಕ್ಷಕ ವಿ.ರಮೇಶ್ ಮನೆಗೂ ದಾಳಿ ನಡೆಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್ ವಿಭಾಗದ ಎಇಇ ವಿಶ್ವನಾಥ ರೆಡ್ಡಿ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಅವರ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ರವಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಫ್ ಡಿ ಎ ಮಹಮ್ಮದ್ ಬಷೀರ್ ಅವರ ಕುಶಾಲನಗರದ ಗೊಂದಿಬಸವನಹಳ್ಳಿ ಮನೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ‘ಹೆಸ್ಕಾಂ’ ಕಾರ್ಯ ನಿರ್ವಾಹಕ ಎಂಜಿನಿಯರ್ ಶೇಖರ ಬಹುರೂಪಿ ಅವರ ಮೂರು ಮನೆಗಳ ಮೇಲೆ, ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ವಿಭಾಗದ ಪ್ರಭಾರ ಎಇಇ ಭೀಮನಗೌಡ ಬಿರಾದಾರ ಅವರ ವಿಜಯಪುರ ನಗರದ ಆರ್ ಟಿಒ ಕಚೇರಿ ಹಿಂಬದಿ ಇರುವ ಮನೆ ಹಾಗೂ ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಎಂಜಿನಿಯರ್ ಜೆ.ಪಿ.ಶೆಟ್ಟಿ ಅವರ ಸಾಸನೂರು ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಕೆ ಆರ್ ಐ ಡಿ ಎಲ್ ಸಹಾಯಕ ಎಂಜಿನಿಯರ್ ಕೋದಂಡರಾಮಯ್ಯ ಅವರ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಕೆಆರ್ ಪುರ ತಹಸೀಲ್ದಾರ್ ಆಗಿರುವ ಅಜಿತ್ ಕುಮಾರ್ ರೈ ದ.ಕ. ಜಿಲ್ಲೆಯ ಪುತ್ತೂರಿನವರಾಗಿದ್ದು ಲೋಕಾಯುಕ್ತ ಅಧಿಕಾರಿಗಳು ಪುತ್ತೂರಿನ ಸೊರಕೆ ಗ್ರಾಮದಲ್ಲಿ ತೋಟದ ಮನೆಗೆ ದಾಳಿ ನಡೆಸಿದ್ದಾರೆ. ಅಜಿತ್ ರೈ ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ದೂರು ಬಂದಿತ್ತು.
The Lokayukta raided government officials residences and their offices in the early hours on Wednesday morning across the state. Earlier on May 31, they had conducted raids in many parts of Karnataka. Similarly, now the lokayukta officials have conducted a surprise raid in several parts of the state including Bengaluru, Chikkamagaluru, Koppal, Tumkur, Bagalkote, Kolar and Raichur.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm