ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟ್ವೀಟ್ ; ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಎಫ್ಐಆರ್, ಇವರ ಸುಳ್ಳು ಫ್ಯಾಕ್ಟರಿಯನ್ನ ನಾವು ಬಂದ್ ಮಾಡ್ತೀವಿ ಎಂದ ಖರ್ಗೆ 

28-06-23 07:51 pm       Bangalore Correspondent   ಕರ್ನಾಟಕ

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಟ್ವೀಟ್‌ ಮಾಡಿದ್ದಕ್ಕೆ ಐಪಿಸಿ ಸೆಕ್ಷನ್‌ 153 ಎ, 120 ಬಿ, 505 (2) ಹಾಗೂ 34ರ ಅಡಿ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು, ಜೂನ್ 28 : ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಟ್ವೀಟ್‌ ಮಾಡಿದ್ದಕ್ಕೆ ಐಪಿಸಿ ಸೆಕ್ಷನ್‌ 153 ಎ, 120 ಬಿ, 505 (2) ಹಾಗೂ 34ರ ಅಡಿ ಎಫ್‌ಐಆರ್‌ ದಾಖಲಾಗಿದೆ. ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್‌ ಮಾಳವೀಯಾ ವಿರುದ್ಧ ದೂರು ನೀಡಿದ್ದರು.

ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಅಮಿತ್‌ ಮಾಳವೀಯ ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಹಾಗೂ ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್‌ ಸೂದ್‌ ವಿರುದ್ಧವೂ ಕಾಂಗ್ರೆಸ್‌ ನಾಯಕರು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೇ ಜೂನ್ 17 ರಂದು ಅಮಿತ್ ಮಾಳವೀಯ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಿಂದ ಅನಿಮೇಟೆಡ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಅವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಹೇಳಲಾಗಿತ್ತು. ಇದು ಕಾಂಗ್ರೆಸ್‌ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರ ವಿರುದ್ಧ ರಮೇಶ್‌ ಬಾಬು, ಪ್ರಿಯಾಂಕ್‌ ಖರ್ಗೆ ದೂರು ನೀಡಿದ್ದರು.

Rahul Gandhi to visit violence-hit Manipur on June 29 | Latest News India -  Hindustan Times

ಜೂನ್‌ 19ರಂದು ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆದಿತ್ತು. ಯಾರು ಶಾಂತಿ ಕದಡುವ ಪ್ರಯತ್ನ ಮಾಡುತ್ತಾರೆ ಅವರ ವಿರುದ್ದ ಕಾನೂನು ಚೌಕಟ್ಟಿನ ಅಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಅದಲ್ಲದೇ, ಫ್ಯಾಕ್ಟ್ ಚೆಕ್ ಯುನಿಟ್ ರಾಜ್ಯದಲ್ಲಿ ಮೊದಲೇ ಇತ್ತು. ಆದರೆ, ಬಿಜೆಪಿ ಸರ್ಕಾರ ಪೊಲೀಸ್ ಇಲಾಖೆಯ ಫ್ಯಾಕ್ಟ್ ಚೆಕ್ ಯುನಿಟ್ ಅನ್ನು ಬಂದ್ ಮಾಡಿತ್ತು. ಸ್ವತಃ ಬಿಜೆಪಿಯವರೇ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿದ್ದರು. ಆದರೆ, ನಾವು ಇನ್ಮುಂದೆ ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದು, ಕೋಮು ಗಲಭೆ, ಶಾಂತಿ ಕದಡುವ ಪೋಸ್ಟ್ ಗಳನ್ನು ಮಾಡಿದರೆ ಅಂಥವರ ವಿರುದ್ದ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

A case has been registered against the BJP IT Cell chief Amit Malviya based on the complaint of a Congress leader who alleged the saffron party leader promoted enmity and instigated people by posting a video on social media, police said on Wednesday. The complaint was lodged by the Karnataka Pradesh Congress Committee member Ramesh Babu in connection with a tweet posted by Malviya.