Renukacharya Vs Nalin Kateel: ನಳಿನ್ ನೇತೃತ್ವದಲ್ಲಿ ಪಕ್ಷ ಹೀನಾಯ ಸೋತಿದೆ, ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ; ರೇಣುಕಾ ಮತ್ತೆ ವಾಗ್ದಾಳಿ 

28-06-23 09:19 pm       Bangalore Correspondent   ಕರ್ನಾಟಕ

ಬಿಜೆಪಿ ಹಿರಿಯ ನಾಯಕ ಎಂ.ಪಿ‌.ರೇಣುಕಾಚಾರ್ಯ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ, ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ.

ಬೆಂಗಳೂರು, ಜೂನ್ 28: ಬಿಜೆಪಿ ಹಿರಿಯ ನಾಯಕ ಎಂ.ಪಿ‌.ರೇಣುಕಾಚಾರ್ಯ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ, ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. 

ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು. ಇದಕ್ಕಾಗಿ ನಳಿನ್ ಕುಮಾರ್ ಸ್ಥಾನ ಬಿಟ್ಟು ಕೊಡಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಿನ್ನೆಯಷ್ಟೇ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಿದ್ದರಿಂದ ಪಕ್ಷಕ್ಕೆ ಸೋಲಾಗಿದೆ. ಕಟೀಲ್ ನಾಯಕತ್ವದಲ್ಲೇ ಬಿಜೆಪಿಗೆ ರಾಜ್ಯದಲ್ಲಿ ಹೀನಾಯ ಸೋಲಾಗಿದ್ದರಿಂದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ನೈತಿಕ ಹಕ್ಕಿಲ್ಲ. ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. 

Nalin Kumar Kateel rubbishes reports of resigning as Karnataka BJP chief |  Deccan Herald

ಬಿ.ಎಸ್ ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವುದು ಕಟೀಲ್ ಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದ ಮಾಜಿ ಶಾಸಕ ರೇಣುಕಾ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಬೇಡವೆಂದರೂ ಕಟೀಲ್ ಮತ್ತು ಇತರ ನಾಯಕರು ಕಿವಿಗೆ ಹಾಕಿಕೊಳ್ಳಲಿಲ್ಲ. ಕೆಎಸ್ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಯಾಕೆ ಕಡೆಗಣಿಸಿದ್ದರು. ಅವರಿಗೇನು ನಡೆಯಲಿಕ್ಕಾಗದ ಸ್ಥಿತಿಯಾಗಿತ್ತೇ.. ಟಿಕೆಟ್ ಕೊಡದೆ ಯಾಕೆ ದೂರ ಇಡಲಾಗಿತ್ತು. ಶೆಟ್ಟರ್ ಕಾರಣದಿಂದ ಆ ಭಾಗದಲ್ಲಿ ಬಿಜೆಪಿಗೆ ಸೋಲಾಗಿದೆ ಎಂದಿದ್ದರು.

Renukacharya slams BJP president Nalin Kateel over failure of BJP in Karnataka, says he has to resign.