ಬ್ರೇಕಿಂಗ್ ನ್ಯೂಸ್
30-06-23 09:45 pm HK News Desk ಕರ್ನಾಟಕ
ಬೆಳಗಾವಿ, ಜೂನ್ 30: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು ಮತ್ತು ಅದರಲ್ಲಿ ಕೆಲವು ನ್ಯೂನತೆಗಳಿವೆ. ಈ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನ್ಯೂನತೆಗಳು ಏನೇನಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಶಿಕ್ಷಣ ನೀತಿಯಲ್ಲಿ ಬೇರೆ ಬೇರೆ ಆವಿಷ್ಕಾರಗಳಿವೆ. ಎರಡು ಮುಖ್ಯ ವಿಷಯಗಳನ್ನು ತೆಗೆದುಕೊಳ್ಳುವುದು, ಮತ್ತೊಂದು ಎಲೆಕ್ಟಿವ್ ವಿಷಯ ತೆಗೆದುಕೊಳ್ಳುವುದು. ಥಿರಿಯಾಟಿಕಲ್ಗಿಂತ ಪ್ರಾಕ್ಟಿಕಲ್ ಜ್ಞಾನ ಕೌಶಲ್ಯಭಿವೃದ್ಧಿ ವಿಚಾರ ಸೇರಿ ಬಹಳಷ್ಟು ವಿಚಾರಗಳು ಒಳಗೊಂಡಿವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ. ಇವೆಲ್ಲ ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಆಗುತ್ತದೆ. ಈ ಎಲ್ಲಾ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತೇವೆ ಎಂದು ಹೇಳಿದರು.
ಹಂತ ಹಂತವಾಗಿ ನೀತಿಯಲ್ಲಿ ಬದಲಾವಣೆ ತರಬೇಕಾಗುತ್ತದೆ. ಆದರೆ ಏಕಾಏಕಿ 2021ರಲ್ಲಿ ಅನುಷ್ಠಾನಕ್ಕೆ ತರುವ ಕೆಲಸ ಆಗಿದೆ. ಎಲ್ಲರ ಜೊತೆಗೂ ಚರ್ಚಿಸಿ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದೇವೆ. ಸಮಗ್ರವಾಗಿ ಎಲ್ಲ ಜಾತಿ, ವರ್ಗಗಳ ಹಿತ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
Reiterating his government’s decision not to implement the National Education Policy 2020 (NEP 2020), Higher Education Minster M.C. Sudhakar has said that the State will implement its own education policy.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm