'ತುರ್ತಾಗಿ ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ' ; ಸಿಡಿಗೆ ತಡೆ ತರದವರು, ಭ್ರಷ್ಟಾಚಾರಿ, ಆರೆಸ್ಸೆಸ್ ಕೈಗೊಂಬೆ ಅಲ್ಲದವರು ಹುದ್ದೆಗೆ ಅರ್ಹತೆ ! 

01-07-23 04:57 pm       Bangalore Correspondent   ಕರ್ನಾಟಕ

ವಿಧಾನಸಭೆ ಚುನಾವಣೆ ನಡೆದು ಎರಡು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆ ಬಿಜೆಪಿ ಪಾಲಿಗೆ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ. 

ಬೆಂಗಳೂರು, ಜುಲೈ 1:  ವಿಧಾನಸಭೆ ಚುನಾವಣೆ ನಡೆದು ಎರಡು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆ ಬಿಜೆಪಿ ಪಾಲಿಗೆ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ. 

ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಕಟಕಿಯಾಡಿದೆ. 

ಅಲ್ಲದೆ, ಆರ್‌ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿರುವ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನು ಚುಚ್ಚಿದ್ದಾರೆ. 

ಮತ್ತೊಂದು ಟ್ವೀಟ್‌ನಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದೆ.

Urgent vacancy for opposition leader in Karnataka, Congress Slams BJP on Twitter handle.