ಬ್ರೇಕಿಂಗ್ ನ್ಯೂಸ್
03-07-23 10:40 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜುಲೈ 3: 20 ಸಾವಿರ ನಿವೇಶನಕ್ಕೆ ಭೂಮಿ ಮಂಜೂರು ಮಾಡಿಸಿದ್ದೇನೆ ಎಂದು ಭೋಗ ನಂದೀಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡುತ್ತೇನೆ. ಒಂದು ವೇಳೆ ನಾನು ಈ ಕೆಲಸ ಮಾಡಿಲ್ಲ ಎಂದಾದರೆ ಈಗಿನ ಶಾಸಕರು ಕೂಡ ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಡಾ ಕೆ ಸುಧಾಕರ್ ಸವಾಲು ಹಾಕಿದ್ದಾರೆ.
ಚಿಕ್ಕಬಳ್ಳಾಪುರದ ಹೊಸ ಶಾಸಕರು ವಸತಿ ಯೋಜನೆ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದ್ದಾರೆ. ಗೆದ್ದಾದ ಮೇಲಾದರೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಲಕ್ಷ್ಯ ನೀಡುತ್ತಾರೆ ಎಂದುಕೊಂಡರೆ ಸುಳ್ಳೇ ಮನೆ ದೇವರು ಎಂಬಂತೆ ನಿವೇಶನಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಜನರ ಮನೆ ಕಟ್ಟುವ ಆಸೆಗೆ ತಣ್ಣೀರೆರೆಚಿದ್ದಾರೆ. ನಾನೆಂದೂ ಸುಳ್ಳಿನ ಯೋಜನೆ ತಂದಿಲ್ಲ. ಆದರೆ, ಕಣ್ಣಿಗೆ ಕಾಣುವ ಯೋಜನೆಗಳನ್ನು ತಂದಿದ್ದೇನೆ. ಇಡೀ ರಾಜ್ಯದಲ್ಲಿ ಒಂದೇ ಕಡೆ 20 ಸಾವಿರ ನಿವೇಶನ ಹಂಚುವ ಕೆಲಸವನ್ನು ಬೇರೆ ಯಾವ ಶಾಸಕ ಮಾಡಿದ್ದಾರೆ ಎಂದು ಅವರೇ ತಿಳಿಸಬೇಕು ಎಂದರು.
ಜನರಿಗೆ ನಿವೇಶನ ನೀಡಲು ಒಟ್ಟು 555 ಎಕರೆ ಜಮೀನು ಮಂಜೂರು ಆಗಿದೆ. ನಾನೇ ಖುದ್ದಾಗಿ ಗ್ರಾಮ ಸಭೆ ಮಾಡಿ ಫಲಾನುಭವಿ ಆಯ್ಕೆ ನಡೆಸಿದ್ದೇನೆ. ಇದು ಸಚಿವ ಸಂಪುಟದಲ್ಲೇ ಮಂಜೂರಾತಿಯಾಗಿದೆ. ಹಕ್ಕು ಪತ್ರ ಹಾಗೂ ಮಂಜೂರಾತಿ ಪತ್ರ ಎಂಬುದರ ಬಗ್ಗೆಯೇ ಈಗಿನ ಶಾಸಕರಿಗೆ ಪ್ರಾಥಮಿಕ ಮಾಹಿತಿ ಇಲ್ಲ. ಸಿನಿಮಾ ಡೈಲಾಗ್ ಹೇಳಿಬಿಟ್ಟರೆ ರಾಜಕೀಯ ಮಾಡಬಹುದು ಎಂದುಕೊಂಡಿದ್ದಾರೆ. ಎಲ್ಲರೂ ಪ್ರತಿ ಬಾರಿ ಯಾಮಾರುವುದಿಲ್ಲ ಎಂದರು.
ದೇವರ ಮೇಲೆ ಪ್ರಮಾಣದ ಸವಾಲು!
ನಾನು ನಿವೇಶನ ನೀಡಿದ್ದು ಸುಳ್ಳು ಎಂದಾದಲ್ಲಿ, ಭೋಗ ನಂದೀಶ್ವರ ದೇವಸ್ಥಾನದಲ್ಲಿ ದೀಪ ಹಚ್ಚಿ ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಇಲ್ಲ ಎಂದು ಈಗಿನ ಶಾಸಕರು ಪ್ರಮಾಣ ಮಾಡಲಿ. ನನ್ನ ಜನರಿಗೆ ಸುಳ್ಳು ಹೇಳಿ ಮೋಸ ಮಾಡುವ ದುಸ್ಥಿತಿಗೆ ನಾನು ತಲುಪಿಲ್ಲ. ಎಚ್‌ಎನ್ ವ್ಯಾಲಿ ಯೋಜನೆಯಡಿ ಮೂರನೇ ಹಂತದ ಸಂಸ್ಕರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಎತ್ತಿನಹೊಳೆ ಯೋಜನೆ ಪೂರ್ಣ ಮಾಡಲು, ನಂದಿ ಬೆಟ್ಟಕ್ಕೆ ರೋಪ್‌ವೇ ಮಾಡಲು, ನಂದಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ಪೂರ್ಣ ಮಾಡಲು ಬಜೆಟ್‌ನಲ್ಲಿ ಅನುದಾನ ನೀಡಬೇಕಿದೆ. ಅದನ್ನು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಾಡಬೇಕಿದೆ ಎಂದು ಒತ್ತಾಯಿಸಿದರು.
ಸಿಎಸ್‌ಆರ್‌ನಡಿ, ಕೆಲವು ಶಾಲಾ ಕಾಲೇಜುಗಳ ಅಭಿವೃದ್ಧಿ ಮಾಡಿಸಲು ಕ್ರಮ ವಹಿಸಿದ್ದೆ. ಅದು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ವಹಿಸಬೇಕಿದೆ. ರೈತರಿಗಾಗಿ ಹೈಟೆಕ್ ಹೂ ಮಾರುಕಟ್ಟೆಗೆ 100 ಕೋಟಿ ರೂ. ಘೋಷಣೆ ಮಾಡಿಸಲಾಗಿದೆ. ಇದಕ್ಕೆ ಹಣ ಒದಗಿಸಬೇಕು. ಕೋಲ್ಡ್ ಸ್ಟೋರೇಜ್ ನಿರ್ಮಾಣ ಕೂಡ ಶೀಘ್ರ ಆಗಬೇಕಿದೆ. ಈ ಎಲ್ಲಾ ಅಂಶಗಳನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಬಜೆಟ್‌ನಲ್ಲಿ ಅನುದಾನ ಕೊಡಿಸಬೇಕು. 5 ವರ್ಷ ಸೇವೆ ಸಲ್ಲಿಸುವ ಭಾಗ್ಯ ಸಿಕ್ಕಿದ ನಂತರ ಜನರ ಅಭ್ಯುದಯಕ್ಕೆ ಒತ್ತು ನೀಡಿ ಎಂದರು.
ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಯೋಜನೆಯನ್ನು ಚಿಕ್ಕಬಳ್ಳಾಪುರಕ್ಕೆ ತರಲಾಗಿದೆ. ಇದರಲ್ಲಿ ಹೆಚ್ಚು ಕಟ್ಟಡ ಹಾಗೂ ವಿನ್ಯಾಸ ಬದಲಾಗಿದ್ದರಿಂದ ಅನುದಾನ ಹೆಚ್ಚಾಗಿದೆ. ಇದನ್ನು ಇಂಜಿನಿಯರ್‌ಗಳ ಸಮಿತಿ ಪರಿಶೀಲಿಸಿ, ಏಕ ಜಡ್ಜ್ ಸಮಿತಿಯಿಂದಲೂ ಪರಿಶೀಲಿಸಿ ಮಂಜೂರು ಮಾಡಲಾಗಿದೆ. ಇದನ್ನು ತನಿಖೆ ಮಾಡುವುದಾದರೆ ಮಾಡಲಿ ಎಂದರು. ಕಾಂಗ್ರೆಸ್ ಸರ್ಕಾರ ಎಲ್ಲಾ ತನಿಖೆಗಳನ್ನು ಮಾಡಲಿ. ಗ್ಯಾರಂಟಿಗಳ ಬಗ್ಗೆ ಮಾತನಾಡುವುದು ಬಿಟ್ಟು ತನಿಖೆ ಬಗ್ಗೆ ಮಾತಾಡಿ ವಿಷಯವನ್ನು ಬೇರೆಡೆ ಸೆಳೆಯಲಾಗುತ್ತಿದೆ ಎಂದರು.
ನಾವು ಸೋತಿರಬಹುದು, ಆದರೆ ಸತ್ತಿಲ್ಲ!
ಮೂರು ಜಿಲ್ಲೆಗಳಲ್ಲಿ 2018ರ ಚುನಾವಣೆ ಹಾಗೂ 2023ರ ಚುನಾವಣೆಯನ್ನು ಗಮನಿಸಿದರೆ ಬಿಜೆಪಿಗೆ ಮತದಾನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಈಗ ಸ್ವಲ್ಪ ಹಿನ್ನಡೆಯಾಗಿರಬಹುದು. ಆದರೆ ಮುಂದಿನ ಚುನಾವಣೆಯಲ್ಲಿ 8 ರಿಂದ 10 ಸ್ಥಾನ ಬಿಜೆಪಿ ಪಡೆಯಲು ಶ್ರಮಿಸಲಿದ್ದೇವೆ. ಹಾಲು ಒಕ್ಕೂಟದ ವಿಚಾರದಲ್ಲಿ ರೈತರೊಂದಿಗೆ ಹೋರಾಟ ಮಾಡಲಾಗುವುದು. ನಾವು ಸೋತಿರಬಹುದು, ಆದರೆ ಸತ್ತಿಲ್ಲ ಎಂದು ಡಾ ಕೆ ಸುಧಾಕರ್ ಹೇಳಿದರು.
Dr Sudhakar Challenges MLA Pradeep Eshwar, says ready for promise at Temple over false allegations.
20-01-25 07:00 pm
HK News Desk
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
20-01-25 11:05 pm
Mangalore Correspondent
Mangalore, Ivan dsouza, CM Siddaramaiah: ಬಹು...
20-01-25 06:00 pm
International Kite Festival 2025, Thannirbhav...
18-01-25 09:27 pm
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
20-01-25 10:18 pm
HK News Desk
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm