ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.
ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm