ಬ್ರೇಕಿಂಗ್ ನ್ಯೂಸ್
12-07-23 04:35 pm HK News Desk ಕರ್ನಾಟಕ
ಬೆಳಗಾವಿ, ಜುಲೈ 12: ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಚಿಕ್ಕೋಡಿಯ ಜೈನ ಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈಗಾಗಲೇ ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಎ1 ಆರೋಪಿ ನಾರಾಯಣ ಮಾಳಿಗೆ ಪಾಪ ಪ್ರಜ್ಞೆ ಕಾಡುತ್ತಿದೆ ಎಂಬುದು ತಿಳಿದುಬಂದಿದೆ.
ಪ್ರಕರಣದಲ್ಲಿ ಬಂಧಿತವಾಗಿರುವ ಇಬ್ಬರು ಆರೋಪಿಗಳಾದ ನಾರಾಯಣ ಮಾಳಿ, ಹಸನ್ ದಲಾಯತ್ರನ್ನು ಚಿಕ್ಕೋಡಿ ಠಾಣೆ ಪೊಲೀಸರು ಜುಲೈ 17ರವರೆಗೆ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಎ1 ಆರೋಪಿ ನಾರಾಯಣ ಮಾಳಿ “ನಂದು ತಪ್ಪಾಯ್ತು ನೀವೆ ನನ್ನ ಗುಂಡು ಹಾರಿಸಿ ಸಾಯಿಸಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುವೆ” ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ.
ಅದಲ್ಲದೇ ಎ1 ಆರೋಪಿ ನಾರಾಯಣ ಮಾಳಿ ಜೈನ ಮುನಿಗಳ ವೈಯಕ್ತಿಕ ಡೈರಿಯನ್ನು ಕೂಡ ಸುಟ್ಟು ಹಾಕಿದ್ದಾನೆ ಎಂದು ಹೇಳಿದ್ದಾನೆ. ಆದರೆ, ಜೈನಮುನಿಗಳ ಡೈರಿಯಲ್ಲಿ ಏನಿತ್ತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಮುನಿಗಳ ಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಡೈರಿ ನಾಪತ್ತೆಯಾಗಿರುವ ಬಗ್ಗೆಯೂ ಆರೋಪಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನಿಗಳ ಜೊತೆ ಆರೋಪಿಗಳು ಯಾವ ರೀತಿ ಸಂಭಾಷಣೆ ಮಾಡಿದ್ದಾರೆ ಎಂಬುದನ್ನು ಪೊಲೀಸರು ಕಂಡುಕೊಳ್ಳುತ್ತಿದ್ದಾರೆ.
ಇದರ ಜೊತೆ ಆರೋಪಿ ನಾರಾಯಣ ಮಾಳಿ ಮನೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಇದರ ಜೊತೆ ಮಾನವೀಯತೆಯನ್ನು ಮೆರೆದಿದ್ದಾರೆ. ಭದ್ರತೆ ಕಾರಣದಿಂದ ನಾರಾಯಣ ಮಾಳಿ ಕುಟುಂಬಸ್ಥರನ್ನು ಬೇರೆ ಕಡೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನೆಲೆ ಆರೋಪಿ ನಾರಾಯಣ ಮಾಳಿ ಮನೆಯಲ್ಲಿರುವ 30ಕ್ಕೂ ಹೆಚ್ಚು ಜಾನುವಾರುಗಳಿಗೆ ಪೊಲೀಸರೇ ಆರೈಕೆ ಮಾಡಿದ್ದಾರೆ.
ಪೊಲೀಸ್ ಸಿಬ್ಬಂದಿಯೇ ಹೊಲದಲ್ಲಿನ ಮೇವು ಕತ್ತರಿಸಿ ಎರಡು ಆಕಳು, ಎರಡು ಎಮ್ಮೆ, 20ಕ್ಕೂ ಹೆಚ್ಚು ಮೇಕೆಗಳಿಗೆ ಹಾಕುತ್ತಿದ್ದಾರೆ. ನಾವು ಸಹ ರೈತರ ಮಕ್ಕಳೇ ಮಾನವೀಯತೆ ದೃಷ್ಟಿಯಿಂದ ಜಾನುವಾರುಗಳಿಗೆ ಮೇವು ಹಾಕುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Jain Monk Murder update, accused A 1 Narayan pleads police to kill him, says will commit suicide for his big mistake. Opposition BJP legislators on Wednesday staged a sit-in demonstration near Gandhi statue in Vidhana Soudha, the seat of the Karnataka legislature, here against the brutal murder of Jain monk Acharya Sri Kamakumara Nandi Maharaj in Belagavi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm