ಬ್ರೇಕಿಂಗ್ ನ್ಯೂಸ್
12-07-23 06:25 pm HK News Desk ಕರ್ನಾಟಕ
ಮೈಸೂರು, ಜುಲೈ 12: ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಹಿಂದೂ ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೆ ಓಡಾಡಬೇಡಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದ್ದಾರೆ. ಅದಲ್ಲದೇ ಎಲ್ಲರನ್ನು ಮುಗಿಸುವ ಪ್ರಯತ್ನವನ್ನ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಮೋಸ, ವಂಚನೆಯಿಂದ ಕೊಲ್ಲುತ್ತಾರೆ ಎಂದು ಶ್ರೀರಾಮುಲು ಹೇಳಿದರು.
ತಿ ನರಸೀಪುರದಲ್ಲಿ ಹತ್ಯೆಯಾಗಿರುವ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗ್ತಿದೆ. ಇಲ್ಲಿ ಧರ್ಮದ ವಿಚಾರವಾಗಿ ನಡೆದಿರುವ ಕೊಲೆ ಇದು. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ, ಪಕ್ಷ ಅನ್ನೋದು ಇಲ್ಲ ಎಂದು ತಿಳಿಸಿದರು.
ಕೊಲೆ ಬಗ್ಗೆ ತನಿಖೆ ನಡೆದರೆ ಯಾರ ಕುಮ್ಮಕ್ಕು ಅಂತಾ ಗೊತ್ತಾಗುತ್ತೆ. ವೇಣುಗೋಪಾಲ್ ಫೋನ್ ಪರಿಶೀಲಿಸಿದರೆ ಯಾರು ಎನ್ನುವುದು ಗೊತ್ತಾಗುತ್ತದೆ. ಅವರಿಗೆ ಯಾರೆಲ್ಲಾ ಫೋನ್ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ವೇಣುಗೋಪಾಲ್ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡಿದ್ದ. ವೇಣುಗೋಪಾಲ್ ಯಾವುದೇ ಕ್ರಿಮಿನಲ್ ಕೆಲಸ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ರಾಜ್ಯದ ಒಳಗಿನ ಜಿಹಾದಿ ಮನಸ್ಥಿತಿ ಇರುವ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ. ವೇಣುಗೋಪಾಲನ ಕುಟುಂಬದ ಕಥೆ ಏನು.. ಅವರ ಮಕ್ಕಳಿಗೆ ಯಾರು ದಿಕ್ಕು. ವೇಣುಗೋಪಾಲ ನಾಯಕ್ ಕೊಲೆ ಪೂರ್ವ ನಿಯೋಜಿತ ಕೃತ್ಯ. ಜಿಹಾದಿ ಮನಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ ಎಂದು ಹೇಳಿದರು.
Sriramulu warns Hindu Karyakartas not to walk or go alone, they might kill you anytime, be cautious Because its Congress government he added after visiting house of member of the “Yuva Brigade" Venugopal in Mysuru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm