ಗೃಹಜ್ಯೋತಿ ಯೋಜನೆ ; ನೋಂದಣಿ ಮಾಡದ ಗ್ರಾಹಕರು ಬೇಗ ಅರ್ಜಿ ಸಲ್ಲಿಸಿ, ಜುಲೈ 27 ಲಾಸ್ಟ ಡೇಟ್,  ರಾಜ್ಯದಲ್ಲಿ 1 ಕೋಟಿಗೂ ಅಧಿಕ ಜನರ ಅರ್ಜಿ ಸಲ್ಲಿಕೆ ! 

13-07-23 08:43 pm       Bangalore Correspondent   ಕರ್ನಾಟಕ

ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು 'ಗೃಹಜ್ಯೋತಿ' ಯೋಜನೆ. ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.

ಬೆಂಗಳೂರು, ಜುಲೈ 13; ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು 'ಗೃಹಜ್ಯೋತಿ' ಯೋಜನೆ. ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.

ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. 'ಗೃಹಜ್ಯೋತಿ' ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾತನಾಡಿದರು. ಇನ್ನೂ ನೋಂದಣಿ ಮಾಡದ ಗ್ರಾಹಕರು ಬೇಗ ಅರ್ಜಿ ಸಲ್ಲಿಸಿ.

ಸಚಿವರು ಮಾತನಾಡಿ, "ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ" ಎಂದು ಹೇಳಿದರು.

ಆತಂಕ ಬೇಡ; ಸರ್ಕಾರ ನೀಡಿದ ಗಡುವಿನೊಳಗೆ ಅರ್ಜಿ ಸಲ್ಲಿಕೆ ಮಾಡದಿದ್ದರೆ ಜನರು ಯಾವುದೇ ಆತಂಕ ಪಡಬೇಕಿಲ್ಲ. ಸಚಿವರು, "ಯೋಜನೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಯೋಜನೆಯೊಳಕ್ಕೆ ತರಲು ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕದ ನಂತರ ಎರಡು ತಿಂಗಳವರೆಗೆ ವಿದ್ಯುತ್ ಅದಾಲತ್ ನಡೆಸಲಾಗುವುದು" ತಿಳಿಸಿದ್ದಾರೆ.

'ಗೃಹಜ್ಯೋತಿ' ಯೋಜನೆ ಫಲಾನುಭವಿಯಾಗಲು ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 1 ಕೋಟಿಗೂ ಅಧಿಕ ಜನರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಜನರು ಯೋಜನೆಯ ಫಲಾನುಭವಿಯಾಗಲು ಆನ್‌ಲೈನ್‌ ಮೂಲಕ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ https://sevasindhu.karnataka.gov.in/sevasindhu/english ವಿವಿರಗಳನ್ನು ನೀಡಿ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇಂಧನ ಇಲಾಖೆ ಹತ್ತಿರದ ನಿಮ್ಮ ಹತ್ತಿರದ ವಿದ್ಯುತ್ ಕಚೇರಿ, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಮೊದಲು ಯೋಜನೆಗೆ ನೋಂದಣಿಯಾಗಲು ಡೆಡ್‌ಲೈನ್ ಇಲ್ಲ ಎಂದು ಹೇಳಿತ್ತು. ಈಗ ಜುಲೈ 27ರ ಅಂತಿಮ ದಿನಾಂಕ ನಿಗದಿ ಮಾಡಿದೆ.

'ಗೃಹಜ್ಯೋತಿ' ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಗ್ರಾಮೀಣ ಪ್ರದೇಶದ ಜನರು ಯೋಜನೆ ಫಲಾನುಭವಿಗಳು ಗ್ರಾಮ ಪಂಚಾಯತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ ಈ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಲು ಪ್ರತಿ ಅರ್ಜಿಗೆ 20 ರೂ. ಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ.

Gruha Jyoti Scheme July 27 Last Date for Registration.