ಬ್ರೇಕಿಂಗ್ ನ್ಯೂಸ್
14-07-23 03:09 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14: ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ಕರ್ನಾಟಕದಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾತ್ರ ಆಗಿಲ್ಲ. 66 ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆ ಹೆಸರಲ್ಲಿ ತಿಕ್ಕಾಟ ನಡೆಸುತ್ತಿದೆ. ಈ ನಡುವೆ, ವಿಪಕ್ಷ ನಾಯಕರಾಗಿ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನೇ ಬಿಜೆಪಿ ಆಯ್ಕೆ ಮಾಡಲಿದೆ ಎನ್ನುವ ಮಾತು ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಧಿಕೃತ ಮೈತ್ರಿಯಾದಲ್ಲಿ ಈ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವುದಕ್ಕಾಗಿ ಜುಲೈ 16-17ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಸಭೆ ನಡೆಯಲಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿರೋಧಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಲು ಜುಲೈ 18ರಂದು ದಿಲ್ಲಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿದೆ. ಕರ್ನಾಟಕದಿಂದ ಜೆಡಿಎಸ್ ನಾಯಕರು ಈ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಭೆಯ ಬಳಿಕ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಈ ಬಗ್ಗೆ ಸುಳಿವು ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜುಲೈ 18ರವ ಸಭೆಯ ಬಳಿಕವೇ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವುದು ಈ ರೀತಿಯ ಅಂತೆ ಕಂತೆಗಳಿಗೆ ಪುಷ್ಟಿ ನೀಡಿದೆ. ಜುಲೈ 18ರಂದು ದಿಲ್ಲಿಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಜೆಡಿಎಸ್ ಭಾಗವಹಿಸಿ ಬಿಜೆಪಿ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡರೆ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ ಆಗಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಬಿಜೆಪಿಯಲ್ಲಿ ನಾಯಕರು ಬಹಿರಂಗ ಕಿತ್ತಾಟದಲ್ಲಿ ತೊಡಗಿರುವುದು, ಬಣಗಳ ಸಂಘರ್ಷ, ಇದಕ್ಕೆ ಪ್ರತಿಯಾಗಿ ಬಿಜೆಪಿ ಹೈಕಮಾಂಡ್ ಆಘಾತಕಾರಿ ನಡೆ ಅನುಸರಿಸಿದೆ ಎನ್ನಲಾಗುತ್ತಿದೆ.
ಸದ್ಯ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ನಾಯಕರಿಗಿಂತ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರೇ ಕಾಂಗ್ರೆಸ್ ವಿರುದ್ಧ ಅಬ್ಬರಿಸುತ್ತಿದ್ದಾರೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರುತ್ತಿದ್ದು, ಬಿಜೆಪಿ ನಾಯಕರ ಬದಲು ಅತ್ಯಂತ ಕಟುವಾಗಿ ಹೋರಾಟ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ಅಲ್ಲದೆ, ಸದನದಲ್ಲಿ ಬಿಜೆಪಿ ನಾಯಕರಿಗೆ ಸಾಥ್ ನೀಡುತ್ತಿದ್ದು, ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರೇ ಅನೇಕ ಬಾರಿ ಸದನದಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಿಬಿಡಿ ಎಂದು ವ್ಯಂಗ್ಯ ಮಾಡಿದ್ದಾರೆ. ಇದೀಗ ಬಿಜೆಪಿಯೇ ವಿಪಕ್ಷ ನಾಯಕನ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟು ಕೈತೊಳೆದುಕೊಳ್ಳಲು ಸಜ್ಜಾಗಿದೆ ಎನ್ನುವ ಮಾಹಿತಿಗಳಿವೆ.
Even after two months have passed since the results of the assembly elections, only the opposition leader has not been elected in Karnataka. Having won 66 constituencies, the BJP is following a policy of delay in choosing the leader of the opposition, and it is likely that JDS leader and former CM HD Kumaraswamy will be chosen as the leader of the opposition. BJP-JDS alliance is expected in the state.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm