Gruha Lakshmi, Seva Sindhu online: ಗೃಹ ಲಕ್ಷ್ಮಿ ಯೋಜನೆ ಜಾರಿಗೆ ದಿನಾಂಕ ಫಿಕ್ಸ್ ; ಜುಲೈ 19ರಂದು ಕೇಂದ್ರ 'ಕೈ' ನಾಯಕರಿಂದ ಚಾಲನೆ, ಆಧಾರ್ ಲಿಂಕ್ ಮಾಡಿದ ಖಾತೆಗೆ 2000 ರೂ. ಟ್ರಾನ್ಸ್‌ಫರ್

15-07-23 12:11 pm       Bangalore Correspondent   ಕರ್ನಾಟಕ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರು, ಜುಲೈ 15: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗೋಷ್ಠಿ ನಡೆಸಿದ ಅವರು ಗೃಹ ಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾಹಿತಿ ನೀಡಿದರು.

ಯೋಜನೆ ಉದ್ಘಾಟನೆಗೆ ನಮ್ಮ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆಯಲಾಗಿದ್ದು, ಅವರು ಲಭ್ಯವಾದರೆ ಜುಲೈ 17 ಸೋಮವಾರ ಸಂಜೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಉದ್ಘಾಟಿಸಲಾಗುದು. ರಾಷ್ಟ್ರೀಯ ನಾಯಕರು ಬರದಿದ್ದಲ್ಲಿ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಾರೆ ಎಂದು ಹೇಳಿದರು.

Gruha Lakshmi' will not smile on I-T-paying women - Star of Mysore

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19ರಿಂದ ಅವಕಾಶವಿದೆ. ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಗೃಹ ಜ್ಯೋತಿ ಯೋಜನೆಯಂತೆ ಈ ಯೋಜನೆಗೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು. ಆದರೆ ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭ ಸಿಗಲಿದೆ ಎಂದು ಹೇಳಿದರು.

How to Link Aadhaar Card to Bank Account & Check Status?

ಅರ್ಜಿ ಸಲ್ಲಿಸುವುದು ಹೇಗೆ?

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್‌ ಪ್ರಯಾಣದ ಖುಷಿಯಲ್ಲಿರುವಾಗಲೇ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ 'ಗೃಹ ಲಕ್ಷ್ಮಿ' ಯೋಜನೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಪೂರ್ಣಗೊಂಡಿದೆ.

200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಪೂರೈಸುವ 'ಗೃಹ ಜ್ಯೋತಿ' ಯೋಜನೆಯಡಿ ಈಗಾಗಲೇ ಆರಂಭವಾಗಿರುವ ಅರ್ಜಿ ಸ್ವೀಕಾರ ಪ್ರಕ್ರಿಯೆ ಒತ್ತಡ ಸೃಷ್ಟಿಸಿದ್ದು, ಸೇವಾ ಸಿಂಧು ಸರ್ವರ್‌ ಓವರ್‌ಲೋಡ್‌ ಆಗಿ ಸಮಸ್ಯೆಯಾಗಿದೆ. ಇಂತಹ ಸಮಸ್ಯೆ ತಪ್ಪಿಸಲು 'ಗೃಹ ಲಕ್ಷ್ಮಿ'ಗೆ ಪ್ರತ್ಯೇಕ ಆ್ಯಪ್‌ ಸಿದ್ಧಪಡಿಸಲಾಗಿದೆ. ಜತೆಗೆ, ಬಾಪೂಜಿ ಸೇವಾ ಕೇಂದ್ರ, ನಾಡಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. https://sevasindhuservices.karnataka.gov.in/

Women and Child Welfare Minister Laxmi Hebbalkar dismissed allegations that women were unable to register for the Gruha Lakshmi scheme due to technical glitches in the server. “We are yet to start receiving applications for the scheme and there is no question of server problems,” she said.