ಬ್ರೇಕಿಂಗ್ ನ್ಯೂಸ್
15-07-23 12:43 pm HK News Desk ಕರ್ನಾಟಕ
ಕಲಬುರಗಿ, ಜುಲೈ 15: ಚುನಾವಣಾ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಚಿತ್ತಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ರಾತ್ರೋರಾತ್ರಿ ಅರೆಸ್ಟ್ ಆಗಿದ್ದಾರೆ. ಮಣಿಕಂಠ ರಾಠೋಡ್ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಗಳ ಕುರಿತಾಗಿ ಕಲಬುರಗಿ ಜಿಲ್ಲೆಯ ಹಲವು ಕಡೆ ಪೊಲೀಸ್ ದೂರು ದಾಖಲಾಗಿದೆ.
ಖರ್ಗೆ ಕುಟುಂಬವನ್ನು ಮುಗಿಸುವುದಾಗಿ ಹೇಳಿದ್ದ ಆಡಿಯೋ ಚುನಾವಣೆ ಸಂದರ್ಭದಲ್ಲಿ ಸಂಚಲನ ಮೂಡಿಸಿತ್ತು. ಶುಕ್ರವಾರ ಅವರನ್ನು ಬಂಧಿಸಿದ್ದು ರಾತ್ರಿಯೇ ಸ್ಟೇಷನ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಚಿತ್ತಾಪುರ ಪೊಲೀಸರು ಚುರುಕುಗೊಳಿಸಿದ್ದಾರೆ.
ಖರ್ಗೆ ಕುಟುಂಬವನ್ನು ಸಾಫ್ ಮಾಡುವುದಾಗಿ ಮಣಿಕಂಠ ರಾಠೋಡ್ ಹೇಳಿದ್ದಾನೆ ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಚಿತ್ತಾಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ಗೆ ಮತ್ತೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದ ಮಣಿಕಂಠ ರಾಠೋಡಗೆ ಇದೀಗ ಸಂಕಷ್ಟ ಎದುರಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಣಿಕಂಠ ರಾಠೋಡ್, ರಾಜಕೀಯ ದ್ವೇಷದ ಕಾರಣಕ್ಕಾಗಿ ಕಿರುಕುಳ ನೀಡುತ್ತಿದ್ದು ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ, ಇವರೆಲ್ಲರ ವಿರುದ್ಧ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸುತ್ತೇನೆ ಎಂದು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ತನ್ನ ವಿರುದ್ಧ ದೂರುಗಳನ್ನು ದಾಖಲಿಸಲಾಗುತ್ತಿದೆ. ಈ ಕುರಿತು ಕಲಬುರಗಿಯ ಚೌಕ್ ಪೊಲೀಸ್ ಠಾಣೆ, ಮಾಡಬೂಳ ಮತ್ತು ಚಿತ್ತಾಪುರ ಪೊಲೀಸ್ ಠಾಣೆಗಳಿಂದ ಈಗಾಗಲೇ ನೋಟಿಸ್‌ಗಳನ್ನು ನೀಡಿದ್ದಾರೆ. ಆಮೂಲಕ ತನ್ನನ್ನು ಹಾಗೂ ತಮ್ಮ ಬೆಂಬಲಿಗರನ್ನು ಬೆದರಿಸುವ ಕೆಲಸ ನಡೆದಿದೆ ಎಂದಿದ್ದಾರೆ.
BJP leader Manikanth Rathod was arrested and later released by the police in a case of violating the code of conduct during the election. Chittapur police arrested in case of violation of code of conduct during elections. Manikanth Rathod has come out on the station bail at night.On the other hand, the police has accelerated the investigation of the case of death threats to the family of AICC president Mallikarjuna Kharge.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm