ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ; ಉಡುಪಿ ಪೊಲೀಸರ ಬಿ ರಿಪೋರ್ಟ್ ಅಂಗೀಕರಿಸಿದ ನ್ಯಾಯಾಲಯ 

15-07-23 08:22 pm       Bangalore Correspondent   ಕರ್ನಾಟಕ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.

ಬೆಂಗಳೂರು, ಜುಲೈ 15: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.

ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲವೆಂದು ಉಡುಪಿ ಪೊಲೀಸರು ಬಿ ರಿಪೋರ್ಟ್​​ ಸಲ್ಲಿಸಿದ್ದರು. 

ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು ಬಿ ರಿಪೋರ್ಟ್ ಅಂಗೀಕರಿಸಿದೆ. 

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Former Minister KS Eshwarappa has been granted relief in connection with the suicide of contractor Santosh Patil. The special people's court in Bengaluru has accepted the B report (closure report due to lack of evidence).On April 2022, 11, Santosh Patil, a contractor, committed suicide by writing eshwarappa's name at a lodge in Udupi. Eshwarappa, who was then rural development and panchayat raj minister, had resigned from the cabinet.