ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿ ಹೋಗಿದೆ ಎನ್ನುವ ಭ್ರಮೆಯಲ್ಲಿದ್ದಾರೆ, ನೋಡೋಣ ಮುಂದೇನಾಗುತ್ತೆ ಅಂತ ! 

17-07-23 12:45 pm       Bangalore Correspondent   ಕರ್ನಾಟಕ

ಮುಂದಿನ ಲೋಕಸಭೆ ಚುನಾವಣೆಗೆ ತಯಾರಾಗಲು ವಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಮಹಾ ಘಟಬಂಧನ ಹೆಸರಿನಲ್ಲಿ ಸಭೆ ನಡೆಸುತ್ತಿದೆ.

ಬೆಂಗಳೂರು, ಜುಲೈ 17: ಮುಂದಿನ ಲೋಕಸಭೆ ಚುನಾವಣೆಗೆ ತಯಾರಾಗಲು ವಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಮಹಾ ಘಟಬಂಧನ ಹೆಸರಿನಲ್ಲಿ ಸಭೆ ನಡೆಸುತ್ತಿದೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದಾರೆ. ಇಂದು ಮತ್ತು ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಸಭೆ ನಡೆಯುತ್ತಿದ್ದು ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ಭಾಗವಹಿಸುತ್ತಿಲ್ಲ, ಅದಕ್ಕೆ ಆಹ್ವಾನ ನೀಡಿಲ್ಲ ಎನ್ನಲಾಗುತ್ತಿದೆ. 

ಈ ಬಗ್ಗೆ ಸ್ವತಃ ಜೆಡಿಎಸ್ ನಾಯಕ ಹೆಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನ ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು. ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಮಹಾಘಟಬಂಧನ್​​ ಸಭೆಯಲ್ಲಿ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿ ಹೋಗಿದೆ ಎನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರೋ, ಇಲ್ಲವೋ ಅನ್ನೋದಕ್ಕೆ ತಲೆಕೆಡಿಸಿಕೊಂಡಿಲ್ಲ. ನಮಗೆ ಎಲ್ಲಿಯೂ ಆಹ್ವಾನ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.

ನಮ್ಮ ಪಕ್ಷದ ಸಂಘಟನೆ ಹೇಗೆ ಮಾಡಬೇಕು, ನಾಡಿನ ಜನತೆ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಬೇಕೋ ಅದರ ಬಗ್ಗೆ ಚಿಂತಿಸಿ ಕಾರ್ಯ ಪ್ರವೃತ್ತರಾಗುತ್ತೇವೆ. ಈಗಾಗಲೇ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿದುಕೊಂಡೆ. ಅದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ, ಮಹಾಘಟ ಬಂಧನ್ ಎಂದು ರಸ್ತೆಯುದ್ಧಕ್ಕೂ ದೊಡ್ಡ ದೊಡ್ಡ ಕಟೌಟ್, ಬ್ಯಾನರ್ ಹಾಕಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ತೋರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಪ್ರಯೋಜನವಿದೆಯೇ ಎಂದು ಕುಮಾರಸ್ವಾಮಿ ಕೇಳಿದರು.

Ahead of the Opposition leaders’ meeting in Bengaluru, Janata Dal (Secular) leader HD Kumaraswamy on Monday said that his party has not received an invitation either from the ‘Mahagathbandhan’ or from the National Democratic Alliance (NDA). He also said that there’s still time to decide on joining NDA.