ಬ್ರೇಕಿಂಗ್ ನ್ಯೂಸ್
17-07-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 17: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳು ಒಂದಾಗಿದ್ದು, ಮಹಾಘಟಬಂಧನ್ ಒಕ್ಕೂಟ ರಚಿಸಲು ಮುಂದಾಗಿವೆ. ಈ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಎರಡು ದಿನಗಳ ಸಭೆ ಕರೆಯಲಾಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಜುಲೈ 17 ಮತ್ತು 18ರಂದು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ದೇಶಾದ್ಯಂತ ಇರುವ 26 ಸಮಾನ ಮನಸ್ಕ ವಿಪಕ್ಷಗಳು ಮತ್ತು 80ರಷ್ಟು ಪ್ರಮುಖ ಮುಖಂಡರು ಪಾಲ್ಗೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುವ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಜೆಎಂಎಂ ಪಕ್ಷದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಡಿಎಂಕೆ ಪಕ್ಷದ ಎಂಕೆ ಸ್ಟಾಲಿನ್, ಆರ್ ಜೆಡಿ ಪಕ್ಷದ ಲಾಲೂ ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್, ಪಿಡಿಪಿಯ ಮೆಹಬೂಬ ಮುಫ್ತಿ, ಸಿಪಿಎಂ ನಾಯಕ ಸೀತರಾಂ ಯೆಚೂರಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಶಿವಸೇನೆಯ ಉದ್ಧವ್ ಠಾಕ್ರೆ, ಎನ್ ಸಿಪಿಯ ಶರದ್ ಪವಾರ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದಾರೆ.
ಇತ್ತೀಚೆಗೆ ಜೂನ್ 23ಕ್ಕೆ ಪಾಟ್ನಾದಲ್ಲಿ ಸೇರಿದ್ದ ಈ ಕುರಿತ ಸಭೆಯಲ್ಲಿ 23 ವಿಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಇದೀಗ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಎರಡನೇ ಸಭೆಯನ್ನು ಆಯೋಜಿಸಿದ್ದು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಒಕ್ಕೂಟವನ್ನು ಸೋಲಿಸಲು ರಣತಂತ್ರ ಹೆಣೆಯಲು ಮುಂದಾಗಿದೆ. ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ. ಮಂಗಳವಾರವೂ ಇಡೀ ದಿನ ಸಭೆ, ಚರ್ಚೆ ನಡೆಯಲಿದ್ದು, ರಾತ್ರಿ 7.30ಕ್ಕೆ ಕಾಂಗ್ರೆಸ್ ಔತಣ ಕೂಟವನ್ನು ಆಯೋಜಿಸಿದೆ.
ವಿಪಕ್ಷಗಳ ಸಭೆಯಲ್ಲಿ ಏನೆಲ್ಲ ಚರ್ಚೆ
ಉತ್ತರ ಮತ್ತು ದಕ್ಷಿಣ ಭಾರತದ ಬಹುತೇಕ ಪ್ರಾದೇಶಿಕ ಪಕ್ಷಗಳು ಸೇರಿ ಕಾಂಗ್ರೆಸ್ ನೇತೃತ್ವದಲ್ಲಿ ಒಟ್ಟು ಸೇರಿದ್ದು ಮತ್ತೊಮ್ಮೆ ಯುಪಿಎ ರೀತಿಯ ಒಕ್ಕೂಟ ರಚಿಸುವ ಸುಳಿವು ನೀಡಿವೆ. ಲೋಕಸಭೆ ಚುನಾವಣೆಯಲ್ಲಿ ಮೋದಿ ಎರಡು ಬಾರಿ ಜಯಭೇರಿ ಬಾರಿಸಿರುವುದರಿಂದ ಈ ಬಾರಿ ಹೇಗಾದರೂ ಮಾಡಿ ಸೋಲಿಸಬೇಕೆಂದು ಹಠತೊಟ್ಟಿವೆ. ಈ ನಿಟ್ಟಿನಲ್ಲಿ ದೇಶಾದ್ಯಂತ 350ಕ್ಕೂ ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ವಿರುದ್ಧ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಮಾಡಿವೆ. ಇದಲ್ಲದೆ, ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುವುದೇ ಅಥವಾ ಕಾಂಗ್ರೆಸ್ ನೇತೃತ್ವದಲ್ಲಿಯೇ ಒಕ್ಕೂಟ ರಚಿಸಿ ಎದುರಿಸುವುದೇ ಎಂಬ ಬಗ್ಗೆ ಚರ್ಚೆ ನಡೆದಿದೆ.
ಮಹಾ ಒಕ್ಕೂಟದಲ್ಲಿ ಕಾಂಗ್ರೆಸ್ಸೇ ದೊಡ್ಡ ಪಕ್ಷ
ಹಾಗೆ ನೋಡಿದರೆ, 26 ವಿಪಕ್ಷಗಳು ಒಟ್ಟು ಸೇರಿದ್ದರೂ, ಇವುಗಳಿಗೆ ಲೋಕಸಭೆ ಸ್ಥಾನ ಇರುವುದು 148. 2014ರಲ್ಲಿ 140 ಸ್ಥಾನ ಹೊಂದಿದ್ದ ಈ ಒಕ್ಕೂಟಕ್ಕೆ 2019ರ ಚುನಾವಣೆಯಲ್ಲಿ 148 ಸ್ಥಾನ ಸಿಕ್ಕಿದ್ದವು. ಪ್ರತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಕೂಟ 353 ಸ್ಥಾನಗಳನ್ನು ಗಳಿಸಿತ್ತು. ಈಗ ಭಿನ್ನಮತ ಬಿಟ್ಟು ಸಭೆ ಸೇರಿರುವ ವಿಪಕ್ಷಗಳ ಪೈಕಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿದ್ದು 52 ಸಂಸದರನ್ನು ಹೊಂದಿವೆ. ಪಶ್ಚಿಮ ಬಂಗಾಳದ ಟಿಎಂಸಿ 22 ಸಂಸದರನ್ನು ಹೊಂದಿದ್ದು, ಎರಡನೇ ಅತಿದೊಡ್ಡ ಪಕ್ಷವಾಗಿದೆ. ಪ್ರಧಾನಿ ಸ್ಥಾನಕ್ಕೆ ಯಾರು ಎಂಬ ವಿಚಾರವೂ ಚರ್ಚೆಯ ಅಂಶಗಳಲ್ಲಿದ್ದು, ರಾಹುಲ್ ಗಾಂಧಿ, ನಿತೀಶ್ ಕುಮಾರ್ ಹೆಸರು ಮುನ್ನೆಲೆಯಲ್ಲಿದೆ. ಆದರೆ ಚುನಾವಣೆಗೆ ಮೊದಲು ಪ್ರಧಾನಿ ಸ್ಥಾನದ ಅಭ್ಯರ್ಥಿ ಘೋಷಿಸುವ ಸಾಧ್ಯತೆ ಕಡಿಮೆ. ಬದಲಿಗೆ, ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನು ಸೋಲಿಸುವ ಅಜೆಂಡಾವನ್ನೇ ಗುರಿ ಇಟ್ಟುಕೊಂಡಿದೆ.
After several hiccups, major opposition parties in the country are finally forging a united front to charge at the ruling Bharatiya Janata Party (BJP) at the Center in the general elections in 2024.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm