ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್‌ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್‌ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್‌ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm