ಜೈನ ಮುನಿ ಹತ್ಯೆ ಪ್ರಕರಣ ; ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ 

19-07-23 11:14 pm       Bangalore Correspondent   ಕರ್ನಾಟಕ

ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 

ಬೆಂಗಳೂರು, ಜುಲೈ 19: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 

ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು.‌ ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ‌ನೀಡಬೇಕು ಎಂದು‌ ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ನೀಡುವ ನಿರ್ಧಾರ ಮಾಡಿದ್ದಾರೆ.

ಜುಲೈ 6ರಂದು ಬೆಳಗ್ಗೆಯಿಂದ ಮುನಿಗಳು ನಾಪತ್ತೆಯಾಗಿದ್ದರು. ಭಕ್ತರು ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮರುದಿನವೇ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿತ್ತು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.

Karnataka government has ordered a probe by the Criminal Investigation Department (CID) into the murder of a Digambar Jain monk in Belagavi.  Chief Minister Siddaramaiah announced in the legislative Assembly that the CID will probe the murder of Acharya Kamakumara Nandi maharaj on July 6. The body was found on July 8.