How to apply Gruha Lakshmi Scheme, In Kannada: ಗೃಹಲಕ್ಷ್ಮಿ ; ಈ ಯೋಜನೆಗೆ ಯಾರೆಲ್ಲ ಅರ್ಹರು? ಯಾವ ದಾಖಲೆಗಳು ಬೇಕು? ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಫುಲ್ ಡೀಟೇಲ್ಸ್ 

20-07-23 02:53 pm       Bangalore Correspondent   ಕರ್ನಾಟಕ

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು, ಜು.20: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹಂಚಿಕೆ ಮಾಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್‌ ಅನಾವರಣಗೊಳಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜೀವ್‌ ಚಂದ್ರಶೇಖರ್‌, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ರಿಜ್ವಾನ್‌ ಅರ್ಷದ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಏನು?

ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ.

Karnataka Gruha Lakshmi Yojana Application Form PDF 2023

ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಹರು?

  • ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
  • ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
  • ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
  • ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
  • ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
  • ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

ಗ್ರಾಮ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ ಮಾಡಿಸಬಹುದು.

Gruha Lakshmi Scheme Karnataka Application Form Direct Link @ sevasindhuservices.karnataka.gov.in – The Karnataka Gruha Lakshmi Scheme Registration has been started from 16th June 2023 at 1:30 PM. Karnataka State Government has launched the Gruha Lakshmi Scheme 2023 for all women in Karnataka state. The Karnataka Government will provide Rs.2,000 to the head women of the house. To avail benefits of this Lakshmi scheme, the women of Karnataka state need to apply online or register at its official website sevasindhuservices.karnataka.gov.in.