ಬ್ರೇಕಿಂಗ್ ನ್ಯೂಸ್
20-07-23 06:43 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ಬೆಂಗಳೂರನ್ನು ಟಾರ್ಗೆಟ್ ಮಾಡ್ಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಉಗ್ರರು ಸೆರೆಸಿಕ್ಕ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯಲ್ಲಿಯೂ ಮತ್ತೊಬ್ಬ ಉಗ್ರ ಸೆರೆ ಸಿಕ್ಕಿದ್ದು, ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಫಯಾಜ್ (32) ಬಂಧಿತ ವ್ಯಕ್ತಿ. ದಾವಣಗೆರೆ ನಗರದ ಆಜಾದ್ ನಗರದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರು, ಚಿತ್ರದುರ್ಗದಲ್ಲಿ ವುಡ್ ಪಾಲಿಶ್ ಕೆಲಸ ಮಾಡುತ್ತಿದ್ದ ಫಯಾಜ್, ಬೆಂಗಳೂರಿನಲ್ಲಿ ಸೆರೆ ಸಿಕ್ಕವರ ಜೊತೆಗೆ ಸಂಪರ್ಕದಲ್ಲಿರುವ ಮಾಹಿತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗುತ್ತಿದೆ. ದಾವಣಗೆರೆಯಲ್ಲಿ ಈತನ ಎರಡನೇ ಪತ್ನಿ ಇದ್ದು, ಆಗಾಗ್ಗೆ ಇಲ್ಲಿಗೆ ಬಂದು ಹೋಗುತ್ತಿದ್ದ. ಬೆಂಗಳೂರಿನಲ್ಲಿ ಒಂದು ಮದುವೆಯಾಗಿದ್ದರೂ ದಾವಣಗೆರೆಯಲ್ಲಿಯೂ ಮದುವೆಯಾಗಿ ಸಂಸಾರ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಬೆಂಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಿಂದ ಬಂದು ದಾವಣಗೆರೆಯಲ್ಲಿ ಒಂದೆರಡು ದಿನ ಇರುತ್ತಿದ್ದರೂ ಆತನ ಬಗ್ಗೆ ಅಕ್ಕಪಕ್ಕದವರಿಗೆ ಹೆಚ್ಚಿನ ಮಾಹಿತಿ ಇಲ್ಲ. ಫಯಾಜ್ ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪಗಳಿದ್ದವು. ಬೆಂಗಳೂರಿನಲ್ಲಿ ಡ್ರಗ್ಸ್, ಆಯುಧ ಮಾರಾಟ ಸೇರಿ ಐದು ಪ್ರಕರಣ ಎದುರಿಸುತ್ತಿದ್ದ. ಅಕ್ರಮ ಆಯುಧ ಮಾರಾಟ ಪ್ರಕರಣದಲ್ಲಿ ಜೈಲು ಸೇರಿದ್ದು ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗ್ರೆನೇಡ್ ಪತ್ತೆ !
ಇದೇ ವೇಳೆ, ಬೆಂಗಳೂರಿನಲ್ಲಿ ಸೆರೆಸಿಕ್ಕ ಐದನೇ ಆರೋಪಿ ಮನೆಯಲ್ಲಿ 4 ಜೀವಂತ ಗ್ರೆನೇಡ್ ಪತ್ತೆಯಾಗಿದೆ. ಬಂಧಿತ ಜಾಹೀದ್‌ನ ಕೊಡಿಗೆಹಳ್ಳಿ ನಿವಾಸದಲ್ಲಿ ಗ್ರೆನೇಡ್‌ಗಳು ಸಿಕ್ಕಿದ್ದು ಬೆಂಗಳೂರಲ್ಲಿ ದೊಡ್ಡ ಮಟ್ಟದ ದಾಳಿಗೆ ಉಗ್ರರು ಸಂಚು ರೂಪಿಸಿದ್ದರೆಂಬುದು ಬಹಿರಂಗವಾಗಿದೆ.
ಜಾಹೀದ್‌ನ ಬೆಂಗಳೂರಿನ ಕೊಡಿಗೆಹಳ್ಳಿಯ ನಿವಾಸದಲ್ಲಿ ಗ್ರೆನೇಡ್‌ಗಳನ್ನು ಕೆಮಿಕಲ್ ಮತ್ತು ಮರಳು ತುಂಬಿದ್ದ ಚೀಲದಲ್ಲಿ ಗ್ರೆನೇಡ್‌ಗಳನ್ನು ಇಡಲಾಗಿತ್ತು ಎಂಬುದನ್ನು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ ಎಸ್‌ಡಿ ಶರಣಪ್ಪ ಖಚಿತಪಡಿಸಿದ್ದಾರೆ. ಅಲ್ಲದೇ ಐವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದ್ದಾರೆ.
5ನೇ ಆರೋಪಿ ಜಾಹೀದ್ ತಲೆಮರೆಸಿಕೊಂಡಿರುವ ಜುನೈದ್ ಜೊತೆ ಸಂಪರ್ಕದಲ್ಲಿದ್ದ. ಪ್ರಮುಖ ಆರೋಪಿ ನೀಡಿದ್ದ ಗ್ರೆನೇಡ್‌ಗಳನ್ನು ಮನೆಯಲ್ಲಿ ಸುರಕ್ಷಿತವಾಗಿಟ್ಟಿದ್ದ. ಆರೋಪಿ ನೀಡಿದ ಮಾಹಿತಿ ಮೇರೆಗೆ ನಮ್ಮ ತಂಡ ಮನೆಗೆ ತೆರಳಿ ಪರಿಶೀಲಿಸಿದಾಗ 4 ಜೀವಂತ ಗ್ರೆನೇಡ್‌ಗಳು ಸಿಕ್ಕಿವೆ ಎಂದು ಹೇಳಿದರು. ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತಲೆಮರೆಸಿಕೊಂಡಿರುವ ಆರೋಪಿ ಜುನೈದ್ ವಿದೇಶದಲ್ಲಿರುವ ಮಾಹಿತಿ ಇದ್ದು, ಆರೋಪಿಯ ಪತ್ತೆಗಾಗಿ ಬೇರೆ ಬೇರೆ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಿದ್ದೇವೆ ಎಂದು ಡಾ.ಎಸ್.ಡಿ ಶರಣಪ್ಪ ತಿಳಿಸಿದ್ದಾರೆ.
4 hand grenades found from terror suspect in Bengaluru, one arrested from Davanagere city. Central Crime Branch (CCB) sleuths on Thursday confiscated four live hand-grenades from the house of one of the five men arrested in connection with a terror plot in Bengaluru.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm