ಬ್ರೇಕಿಂಗ್ ನ್ಯೂಸ್
21-07-23 05:38 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾರತದ ಅತ್ಯಂತ ಶ್ರೀಮಂತ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಸೋಸಿಯೇಷನ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ (ಎನ್ಇಡಬ್ಲ್ಯೂ) ಸಂಸ್ಥೆಗಳು ನಡೆಸಿರುವ ಅಧ್ಯಯನ ವರದಿಗಳಲ್ಲಿ ಈ ವಿಚಾರವನ್ನು ಉಲ್ಲೇಖಿಸಿವೆ. ಡಿ.ಕೆ. ಶಿವಕುಮಾರ್ ಅವರ ಒಟ್ಟಾರೆ ಆಸ್ತಿ ಮೊತ್ತ 1,413 ಕೋಟಿ ರೂ.ಗಳಾಗಿದ್ದು, ಅವರಿಗೆ ದೇಶದ ಸಿರಿವಂತ ಶಾಸಕರೆಂಬ ಹೆಗ್ಗಳಿಕೆಯನ್ನು ತಂದಿತ್ತಿದೆ.
ಅಷ್ಟೇ ಅಲ್ಲ, ಭಾರತದ ಟಾಪ್ 3 ಸಿರಿವಂತ ಶಾಸಕರ ಪಟ್ಟಿಯಲ್ಲಿಯೂ ರಾಜ್ಯದ ಶಾಸಕರೇ ಇದ್ದು, ಸಂಸ್ಥೆಗಳು ಬಿಡುಗಡೆ ಮಾಡಿರುವ ದೇಶದ ಸಿರಿವಂತ ಶಾಸಕರ ಪಟ್ಟಿಯ ಟಾಪ್ 20ರಲ್ಲಿ 12 ಮಂದಿ ಶಾಸಕರು ರಾಜ್ಯದವರೇ ಆಗಿರುವುದು ಗಮನಾರ್ಹ.
ಈ ವರ್ಷ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ರಾಜಕಾರಣಿಗಳು ಸಲ್ಲಿಸಿದ್ದ ಆಸ್ತಿ ವಿವರಗಳನ್ನು ಆಧರಿಸಿ ಈ ಪಟ್ಟಿಯನ್ನು ತಯಾರಿಸಲಾಗಿದೆ. ಅಧ್ಯಯನ ವರದಿಯ ಪ್ರಕಾರ, ರಾಜ್ಯದ ಒಟ್ಟಾರೆ ಶಾಸಕರ ಪೈಕಿ ಶೇ. 14ರಷ್ಟು ಶಾಸಕರು ಶತಕೋಟಿ ಒಡೆಯರು. ಭಾರತದ ಯಾವುದೇ ಒಂದು ರಾಜ್ಯದಲ್ಲಿ ಹೀಗೆ ಶೇಕರಾವಾರು ಲೆಕ್ಕಾಚಾರದಲ್ಲಿ ಅತಿ ಹೆಚ್ಚು ಶತಕೋಟಿ ಒಡೆಯರು ಇರುವುದು ಕರ್ನಾಟಕದಲ್ಲೇ ಎಂದು ಎಡಿಆರ್ ವರದಿ ಹೇಳಿದೆ. ಭಾರತದ ಒಟ್ಟಾರೆ ಶಾಸಕರ ಆಸ್ತಿ ಮೌಲ್ಯಗಳನ್ನು ಲೆಕ್ಕ ಹಾಕಿದರೆ ಸರಾಸರಿಯಾಗಿ ಪ್ರತಿಯೊಬ್ಬ ಶಾಸಕನು 64.3 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ 3ರಲ್ಲಿರುವ ಕರ್ನಾಟಕ ಶಾಸಕರು
ಎಡಿಆರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಟಾಪ್ 3ರಲ್ಲಿ ರಾಜ್ಯದ ಶಾಸಕರೇ ಇದ್ದಾರೆ. ಟಾಪ್ 1ರಲ್ಲಿ ಡಿ.ಕೆ. ಶಿವಕುಮಾರ್ ಇದ್ದರೆ, ಟಾಪ್ 2ರಲ್ಲಿ ಗೌರಿ ಬಿದನೂರು ಶಾಸಕ ಎಚ್. ಕೆ. ಪುಟ್ಟಸ್ವಾಮಿ ಗೌಡ ಇದ್ದಾರೆ. ಇವರ ಆಸ್ತಿ ಮೌಲ್ಯ 1,267 ಕೋಟಿ ರೂ.ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮೂರನೇ ಸ್ಥಾನದಲ್ಲಿ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ ಅವರಿದ್ದು ಅವರ ಒಟ್ಟಾರೆ ಆಸ್ತಿ ಮೌಲ್ಯ 1,156 ಕೋಟಿ ರೂ. ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
The richest MLA in the country has assets worth over ₹ 1,400 crore while an MLA from West Bengal does not have even ₹ 2,000 to his name, a report by an advocacy group has revealed. D K Shivakumar, who became Karnataka's Deputy Chief Minister after the Congress' resounding victory in the state Assembly elections in May, has assets worth ₹ 1,413 crore and the next two richest MLAs are also from the state, according to the report by the Association for Democratic Reforms (ADR).
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm