ಬ್ರೇಕಿಂಗ್ ನ್ಯೂಸ್
21-07-23 08:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧಾರ ಮಾಡಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ ಕುಮಾರಸ್ವಾಮಿ ಶುಕ್ರವಾರ ಜಂಟಿಯಾಗಿ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಜೊತೆಗೆ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಎರಡೂ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ತಂಡ ರಚನೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಏರ್ಪಡುತ್ತದೆ ಎನ್ನುವುದು ಈಗಾಗಲೇ ಕೇಳಿಬರುತ್ತಿರುವ ಮಾತು. ಆದರೆ ಈ ಬಗ್ಗೆ ಅಧಿಕೃತ ನಿರ್ಣಯ ಹೊರಬೀಳದಿದ್ದರೂ ವಿಧಾನಸಭೆ ಅಧಿವೇಶನದಲ್ಲಿ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ಹೋರಾಟ ಕೈಗೆತ್ತಿಕೊಂಡಿರುವುದು ಎರಡು ಪಕ್ಷಗಳು ಮೈತ್ರಿಗೆ ಮುಂದಾಗಿರುವ ಸುಳಿವು ಎನ್ನಲಾಗುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ಅಥವಾ ಮೈತ್ರಿಗೆ ಮುಂದಾದರೆ ವಿಪಕ್ಷ ನಾಯಕ ಸ್ಥಾನವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಇದರ ನಡುವಲ್ಲೇ ವಿಧಾನಸಭೆ ಅಧಿವೇಶನ ಕೊನೆಗೊಳ್ಳುವ ಸಂದರ್ಭದಲ್ಲೇ ಎರಡು ಪಕ್ಷಗಳ ಪ್ರಮುಖ ನಾಯಕರು ಜೊತೆಗೂಡಿ ಸುದ್ದಿಗೋಷ್ಟಿ ನಡೆಸಿರುವುದು ಕುತೂಹಲ ಮೂಡಿದೆ.
Former Chief Minister HD Kumaraswamy said that it is ironic that the state Congress government led the budget session when the opposition was out. He spoke at a joint press conference with former CM Basavaraja Bommai at his office in Vidhansouda.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm