ಪಿಎಸ್ಐ ಹಗರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿದ ಸರ್ಕಾರ ; ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಆದೇಶ, ಕಾಂಗ್ರೆಸ್ ದ್ವೇಷದ ರಾಜಕಾರಣ ಎಂದ ಬೊಮ್ಮಾಯಿ 

22-07-23 10:54 pm       Bangalore Correspondent   ಕರ್ನಾಟಕ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಆದೇಶಿಸಿದೆ.

ಬೆಂಗಳೂರು, ಜುಲೈ 22: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಲಾಗಿದೆ. ಹಗರಣದ ಕುರಿತ ವರದಿಯನ್ನು ಮೂರು ತಿಂಗಳಲ್ಲಿ ನೀಡುವಂತೆ ಆಯೋಗವನ್ನು ಸರ್ಕಾರ ಕೋರಿದೆ.

LawBeat | “I am ready to behead myself if I make a mistake”: Justice  Veerappa of Karnataka High Court on wild allegations against High Court  judges

2021ರ ಜನವರಿ 21ರಂದು ಪಿಎಸ್ಐಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿತ್ತು. ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ದಿನಗಳಲ್ಲಿ ಪಿಎಸ್‌ಐ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಶಿಫಾರಸು ಮಾಡುವಂತೆ ಆಯೋಗವನ್ನು ಕೋರಲಾಗಿದೆ. 

ಈಗಾಗಲೇ ತ‌ನಿಖೆ ನಡೆಸಿರುವ ಸಿಐಡಿ ಹಾಗೂ ಪೊಲೀಸ್ ನೇಮಕಾತಿ ವಿಭಾಗವು ನ್ಯಾಯಾಂಗ ಆಯೋಗಕ್ಕೆ ಸಮಗ್ರ ಮಾಹಿತಿ ಮತ್ತು ದಾಖಲೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಪ್ರಕರಣದಲ್ಲಿ ತನಿಖೆ ನಡೆಸಿದ್ದ ಸಿಐಡಿ ತಂಡವು ಹಲವರನ್ನು ಬಂಧಿಸಿತ್ತು. ಮತ್ತೆ ವಿಚಾರಣಾ ಆಯೋಗದಿಂದ ತನಿಖೆ ಆರಂಭಗೊಳ್ಳಲಿದೆ. 

ದ್ವೇಷದ ರಾಜಕಾರಣ ; ಬೊಮ್ಮಾಯಿ 

ಪಿಎಸ್ಐ ಹಗರಣವನ್ನು ಮತ್ತೆ ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್‍ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ. ಈ ಹಗರಣದಲ್ಲಿ ಕಾಂಗ್ರೆಸ್‍ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೋರ್ಟ್‍ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದಿದ್ದಾರೆ.

The Congress-led Karnataka government has constituted a one-man judicial commission to probe the allegations of a scam in the recruitment of Police Sub-Inspector (PSI) in 2021. The government has appointed Karnataka High Court retired judge B Veerappa to probe the allegations and submit the report within three months.