ಮಾನ್ಯ 'ಸತ್ಯರಾಮಯ್ಯ'ನವರೇ 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ! ನೈಸ್ ಅಕ್ರಮಗಳ ಭಾಗವತ ತೆರೆದಿಡಿ, ಜನರಿಂದ 'ಸುಳ್ಳು'ರಾಮಯ್ಯ ಅನಿಸ್ಕೋಬೇಡಿ!  

23-07-23 06:23 pm       Bangalore Correspondent   ಕರ್ನಾಟಕ

ನೈಸ್ ಅಕ್ರಮದ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಈಗ ಕರ್ನಾಟಕದ ಮುಖ್ಯಮಂತ್ರಿ.

ಬೆಂಗಳೂರು, ಜುಲೈ 23: ನೈಸ್ ಅಕ್ರಮದ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ.  

ತಾವು 'ಸತ್ಯರಾಮಯ್ಯ'ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ. 

NICE project: SC gives eight weeks to Karnataka to resolve land dispute |  Deccan Herald

ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು. 

Supreme Court seeks Centre's response on Assam MLA Akhil Gogoi's plea  challenging sedition charges against him - The Hindu

ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ @BJP4Karnataka ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. 

ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ @siddaramaiah ನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ 'ನಿತ್ಯ ಕಿರುಕುಳ'ವನ್ನು ಮರೆಯಲಾದೀತೆ? 

ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ 'ಅಪರ ಹರಿಶ್ಚಂದ್ರ'ನ ಸರಕಾರ! ಹೌದಲ್ಲವೇ? 

ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್  ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟ ಹೆಜ್ಜೆ ಇಡಿ. 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? 

High Court To Hear Petition To Disqualify Karnataka Chief Minister  Siddaramaiah On July 28

ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಮಾರ್ಮಿಕ ಮಾತುಗಳಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಚುಚ್ಚಿದ್ದಾರೆ.

In his fresh bid to corner the Congress government in Karnataka, JD(S) leader H D Kumaraswamy asked it to take over the Bangalore-Mysore Infrastructure Corridor built and owned by Nandi Infrastructure Corridor Enterprise (NICE) and take action against “irregularities” in the project.