ಬ್ರೇಕಿಂಗ್ ನ್ಯೂಸ್
24-07-23 05:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಚುನಾವಣೆ ಗೆಲ್ಲಲು ತನ್ನ ವಿರೋಧಿಗಳಿಗೆ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಅದಕ್ಕಾಗಿ ಸಾಕಷ್ಟು ಆಂಟಿಗಳನ್ನು ಇಟ್ಟುಕೊಂಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಈ ರೀತಿ ಆರೋಪ ಮಾಡಿದ್ದಾರೆ.
ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಈ ವೇಳೆ ಕೆಲವು ವಿಚಾರಗಳನ್ನು ಹೊರ ಗೆಡವಿದ್ದಾರೆ. ಹನಿಟ್ರ್ಯಾಪ್ ಮಾಡಿ ಹೆದರಿಸಲೆಂದೇ, ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹೆಣ್ಣುಗಳನ್ನು ಮುಂದಿಟ್ಟು ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.
ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ, ಕೆಲಸ ಮಾಡುತ್ತೀರಾ ಅಂತ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ಅವರ ವಿಕಾಸಸೌಧ, ವಿಧಾನಸೌಧದ ಖಾಸಗಿ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು. ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್, ಆರ್.ಆರ್ ನಗರದ ಪಕ್ಷದ ಅಭ್ಯರ್ಥಿ ಕುಸುಮಾ ಹನುಮಂತ ರಾಯಪ್ಪ ಹಾಜರಿದ್ದರು.
Bjp Munirathna is involved in 'Honey Trap' alleged Velu Nayakar, Ex BBMP Corporator, has own studio setup and ladies. Velu Nayakar former Bruhat Bengaluru Palike (BBMP) corporator and once a close confidante of Ex-Minister and RR Nagar MLA Muniratha Naidu has reportedly alleged that Munirathna was involved in honey trapping people and has got a studio for the purpose.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm