ಕಾಂಗ್ರೆಸ್ ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ; ಸಂಚಲನ ಸೃಷ್ಟಿಸಿದ ಡಿಕೆಶಿ 

24-07-23 10:19 pm       Bangalore Correspondent   ಕರ್ನಾಟಕ

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, ಜುಲೈ 24: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರು ಎಚ್ಡಿಕೆ ಸಿಂಗಾಪುರಕ್ಕೆ ತೆರಳಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಬಹುಮತದ ಸರ್ಕಾರ ಬೀಳಿಸಲು ಯೋಜನೆ ರೂಪಿಸಲಾಗುತ್ತಿದೆ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಅವರು ಸಿಂಗಾಪುರದಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಸಂಚು ರೂಪಿಸಲಾಗುತ್ತಿದೆ ಎಂದಿದ್ದಾರೆ. 

ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.  

ಇದೆಲ್ಲವೂ ಒಂದು ತಂತ್ರ ಮತ್ತು ನಾನು ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಬೆಂಗಳೂರಿನಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದರೆ ಸಂಚು ಬಯಲಿಗೆ ಬರುವ ಸಾಧ್ಯತೆ ಇರುವುದರಿಂದ ಸಿಂಗಾಪುರದಲ್ಲಿ ತಂತ್ರ ಮಾಡಲಾಗಿದೆ ಎಂದು ಡಿಸಿಎಂ ಹೇಳಿದ್ದಾರೆ. ಡಿಕೆಶಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದ್ದು ಬಿಜೆಪಿ ನಾಯಕರು ನಾವೇನೂ ಇದರ ಹಿಂದೆ ಇಲ್ಲ ಎಂದು ಹೇಳುವ ಹೆಗಲು ಮುಟ್ಟಿ ನೋಡುವ ಕೆಲಸ ಮಾಡಿದ್ದಾರೆ.

Deputy Chief Minister D.K. Shivakumar on July 24 claimed that a conspiracy is being hatched to topple the Congress government in Karnataka. Speaking to reporters in Bengaluru, Mr Shivakumar, who is also the president of the KPCC, said that a “strategy” is underway in Singapore against the Congress government in the State.