ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm