ಬ್ರೇಕಿಂಗ್ ನ್ಯೂಸ್
26-07-23 07:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 26: ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಶಿವಮೊಗ್ಗ ಮತ್ತು ಹುಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿ ಬಂಧಿಸಲಾಗಿರುವ ಆರೋಪಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮಾಡಿರುವ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಪರಮೇಶ್ವರ್ ಅಧಿಕಾರಿಗಳಿಗೆ ಪತ್ರ ಬರೆದಿರುವುದು ತೀವ್ರ ವಿವಾದಕ್ಕೀಡಾಗಿದೆ.
ಈ ಕುರಿತು ಪ್ರತಿಪಕ್ಷ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು 'ಒಂದು ಸಮುದಾಯದ ಕೋಮು ಅಪರಾಧಿಗಳಿಗೆ ಕ್ಲೀನ್ ಚಿಟ್ ನೀಡುವ ಮೂಲಕ, ಜಿಹಾದಿಗಳು ಮತ್ತು ಪಿಎಫ್‌ಐ ಭಯೋತ್ಪಾದಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ' ಎಂದು ಆರೋಪಿಸಿದೆ. ಸಚಿವ ಪರಮೇಶ್ವರ ಅವರು ಜುಲೈ 19ರಂದು ಪ್ರಧಾನ ಕಾರ್ಯದರ್ಶಿ ಕಾರಾಗೃಹಗಳು, ನಾಗರಿಕ ರಕ್ಷಣೆ ಮತ್ತು ಸಹಾಯಕ ಸೇವೆಗಳು (ಪಿಸಿಎಎಸ್), ಗೃಹ ಇಲಾಖೆಗೆ ಬರೆದ ಪತ್ರದಲ್ಲಿ ಶಾಸಕ ಮತ್ತು ಮಾಜಿ ಸಚಿವ ತನ್ವೀರ್ ಸೇಠ್ ಅವರ ಮನವಿ ಪತ್ರವನ್ನು ಉಲ್ಲೇಖಿಸಿದ್ದಾರೆ.
'ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತಿತರ ಕಡೆ ನಡೆದ ಪ್ರತಿಭಟನೆ, ಗಲಭೆಗಳಿಗೆ ಸಂಬಂಧಿಸಿದಂತೆ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಸುಳ್ಳು ಪ್ರಕರಣಗಳಡಿ ಬಂಧಿಸಲಾಗಿದ್ದು, ಪರಿಶೀಲನೆ ನಡೆಸಿ ನಿಯಮಾನುಸಾರ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ಪರಿಶೀಲಿಸಿದ ನಂತರ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ' ಎಂದು ಗೃಹ ಸಚಿವರು ಪತ್ರದಲ್ಲಿ ಉಲ್ಲೇಖ ಮಾಡಿದ್ದರು.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯಲ್ಲಿನ ಗಲಭೆಕೋರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು ಅತ್ಯಂತ ಕೆಟ್ಟ ಘಟನೆಗಳಲ್ಲಿ ಒಂದಾಗಿದ್ದು, 'ರಾಜ್ಯದಲ್ಲಿ ಗಲಭೆ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ಪಿಎಫ್‌ಐ ಗೂಂಡಾಗಳ ವಿರುದ್ಧದ ಪ್ರಕರಣಗಳನ್ನು ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿತ್ತು. ಇದೀಗ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಕೋರರ ಪ್ರಕರಣಗಳನ್ನು ಹಿಂಪಡೆಯಲು ಗೃಹ ಸಚಿವ ಪರಮೇಶ್ವರ ಅವರು ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ' ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕಳೆದ ಬಾರಿಯಂತೇ ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ಎಂಬ ಹಣೆಪಟ್ಟಿ ಹೊತ್ತುಕೊಳ್ಳುವ ರೀತಿ ಗಂಭೀರ ಆರೋಪ ಕೇಳಿಬಂದಿದೆ.
ತನ್ನ ಮೇಲಿನ ಆರೋಪಗಳನ್ನು ಗೃಹ ಸಚಿವ ಜಿ. ಪರಮೇಶ್ವರ್ ತಳ್ಳಿಹಾಕಿದ್ದು ಸ್ಪಷ್ಟನೆ ನೀಡಿದ್ದಾರೆ. ಯಾರೋ ಪತ್ರ ಬರೆದ ಕಾರಣಕಕ್ಕೆ ನಾವು ಕೇಸ್ ಹಿಂಪಡೆಯಲು ಆಗಲ್ಲ. ಆದರೆ, ಪ್ರಕರಣದಲ್ಲಿ ಕೆಲವರ ವಿರುದ್ಧ ಸುಳ್ಳು ದೋಷಾರೋಪಣೆ ಮಾಡಲಾಗಿದೆ ಎಂದು ಪತ್ರದಲ್ಲಿ ಕೇಳಿಕೊಳ್ಳಲಾಗಿದೆ. ಹಾಗಾಗಿ, ನಾವು ಆ ಪತ್ರದಲ್ಲಿರುವ ವಿಚಾರವನ್ನು ಪರಿಶೀಲಿಸುವಂತೆ ಸಂಪುಟ ಉಪ ಸಮಿತಿಗೆ ಒಪ್ಪಿಸಿದ್ದೇವೆ. ಸಮಿತಿ ಸಲ್ಲಿಸುವ ವರದಿ ಆಧಾರದಲ್ಲಿ ಸಂಪುಟದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.
2020ರ ಆಗಸ್ಟ್ ತಿಂಗಳಲ್ಲಿ ಆಗಿನ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕಾರಣ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಮೂವರು ಸಾವಿಗೀಡಾಗಿದ್ದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣೆಗೆ ಬೆಂಕಿ ಕೊಟ್ಟು ಹಲವಾರು ವಾಹನಗಳು ಬೆಂಕಿಗೆ ತುತ್ತಾಗಿದ್ದವು. ಇದೊಂದು ಭಯೋತ್ಪಾದಕ ಕೃತ್ಯ ಎಂದು ಕೋರ್ಟ್ ಉಲ್ಲೇಖ ಮಾಡಿದ್ದರಿಂದ ಪ್ರಕರಣದ ತನಿಖೆಯನ್ನು ಆಗಿನ ಸರ್ಕಾರ ಎನ್ಐಎಗೆ ವಹಿಸಿತ್ತು. ಘಟನೆ ಸಂಬಂಧಿಸಿ ಅಧಿಕಾರಿಗಳು 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಕೆಲವು ಕಾಂಗ್ರೆಸ್ ಮುಖಂಡರು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ಹೀಗಾಗಿ ಒಟ್ಟು ಪ್ರಕರಣ ಕೈಬಿಡಲು ಕಾಂಗ್ರೆಸ್ ಸರ್ಕಾರ ತಂತ್ರ ನಡೆಸಿದೆ ಎನ್ನುವ ಆರೋಪ ಕೇಳಿಬಂದಿದೆ.
The ruling Congress's decision to take back cases against the accused in sensational DJ Halli- KG Halli violence in Bengaluru have triggered a huge controversy in Karnataka.Home Minister Dr G. Parameshwara had written to Karnataka police department to consider withdrawing the cases against the persons involved in various incidents including DJ Halli-KG Halli violence.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm