ಬ್ರೇಕಿಂಗ್ ನ್ಯೂಸ್
28-07-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಪ್ರಿಯಕರ ತನ್ನನ್ನು ನಾಯಿ ತರ ಟ್ರೀಟ್ ಮಾಡ್ತಿದ್ದಾನೆ, ಹುಡುಗಿಯರು ಯಾರು ಕೂಡ ಇನ್ಮುಂದೆ ಲವ್ ಮಾಡಬೇಡಿ.. ಎಂದು ಡೆತ್ ನೋಟ್ ಬರೆದಿಟ್ಟು ಮಾಡೆಲ್ ಆಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಜುಲೈ 21ರಂದು ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ಮಾಡೆಲ್ ಕೂಡ ಆಗಿದ್ದ ವಿದ್ಯಾಶ್ರೀ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪ್ರಿಯಕರನೇ ಕಾರಣ ಎನ್ನುವ ಅಂಶ ಆಕೆಯ ಡೈರಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾಶ್ರೀ ಡೈರಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪ್ರಿಯಕರ ಅಕ್ಷಯ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯುವತಿ ಮನೆಯಲ್ಲಿ ನಾಲ್ಕು ದಿನಗಳ ಬಳಿಕ ಜುಲೈ 26ರಂದು ಡೆತ್‌ನೋಟ್ ಪತ್ತೆಯಾಗಿದ್ದು ಇದರ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಅಕ್ಷಯ್‌ನನ್ನ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಐಟಿ ಉದ್ಯೋಗ ಮತ್ತು ಮಾಡೆಲಿಂಗ್ ಮಾಡುತ್ತಿದ್ದ ವಿದ್ಯಾ ಮತ್ತು ಅಕ್ಷಯ್ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ, ಅಕ್ಷಯ್ ವಿದ್ಯಾಳಿಂದ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನ ಸಾವಿಗೆ ಅಕ್ಷಯ್ ಕಾರಣ. ಅವನು ನನ್ನ ನಾಯಿತರ ಟ್ರೀಟ್ ಮಾಡುತ್ತಾ ಇದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದರೆ, ನನಗೆ ಮತ್ತು ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್ ಸ್ವಿಚ್ ಆಫ್ ಮಾಡಿದ್ದಾನೆ. ನನ್ನ ಡಿಪ್ರೆಷನ್ಗೆ ಹೋಗುವಂತೆ ಮಾಡಿದ್ದಾನೆ. ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟೇನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯಬಿಟ್ಟು ಯಾರು ಲವ್ ಮಾಡಬೇಡಿ. Good bye this World ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Bangalore model commits suicide says accused boyfriend treated her like a dog, arrested. Vidyashree committed suicide in Kempapura area of Bengaluru North Taluk on July 21. Police said that the model wrote in her diary that the "accused treated her like a dog". She claimed that whenever she asked him to return her money, the accused would abuse her family members and she couldn't live with the humiliation
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm